×
Ad

ಹನೂರು: ಓಮ್ನಿ ಢಿಕ್ಕಿ; ಮಹಿಳೆ ಮೃತ್ಯು

Update: 2018-02-12 21:27 IST

ಹನೂರು,ಫೆ.12: ಸೌದೆ ಹೊತ್ತು ತರುತ್ತಿದ್ದ ಮಹಿಳೆಯೋರ್ವಳಿಗೆ ಮಲೆ ಮಹದೇಶ್ವರ ಬೆಟ್ಟದ ಕಡೆಯಿಂದ ಬರುತ್ತಿದ್ದ ಓಮ್ನಿ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಣನಕರೆ ಗ್ರಾಮದಲ್ಲಿ ಜರುಗಿದೆ.

ಕೋಣನಕೆರೆ ಗ್ರಾಮದ ಬಸಮ್ಮ(52) ಎಂಬಾಕೆಯೇ ಮೃತ ಮಹಿಳೆಯಾಗಿದ್ದು, ಈಕೆ ಸೋಮವಾರ ಮಧ್ಯಾಹ್ನ 3 ಗಂಟೆ ವೇಳೆಯಲ್ಲಿ ಸೌದೆ ಹೊತ್ತು ಗ್ರಾಮದ ಕಡೆಗೆ ತೆರಳುತ್ತಿದ್ದಳು. ಈ ವೇಳೆ ಮಹದೇಶ್ವರನ ದರ್ಶನ ಪಡೆದು ಬೆಂಗಳೂರಿನತ್ತ ತೆರಳುತ್ತಿದ್ದ ಓಮ್ನಿ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಕೆಳಕ್ಕೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News