×
Ad

ಪಿಡಿಒ-ಗ್ರಾ.ಪಂ.ಕಾರ್ಯದರ್ಶಿ ಪರಿಶೀಲನಾ ಪಟ್ಟಿ ಪ್ರಕಟ

Update: 2018-02-13 21:42 IST

ಬೆಂಗಳೂರು, ಫೆ.13: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್-1 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಸಲ್ಲಿಸಿದ ದಾಖಲಾತಿಗಳ ಪರಿಶೀಲನೆಯ ನಂತರ ಪರಿಶೀಲನಾ ಪಟ್ಟಿಯನ್ನು ರಾಜ್ಯ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಫೆ.12ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಪರಿಷ್ಕೃತ ಮೆರಿಟ್ ಪಟ್ಟಿ: ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ನೇಮಕಾತಿ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು 2017ರ ನ.8ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ, ಆಕ್ಷೇಪಣೆಗಳಿದ್ದಲ್ಲಿ ದಾಖಲೆಗಳೊಂದಿಗೆ ಪ್ರಾಧಿಕಾರಕ್ಕೆ ಸಲ್ಲಿಸಲು ಸೂಚಿಸಲಾಗಿತ್ತು. ನಿಯಮಾನುಸಾರ ಆಕ್ಷೇಪಣೆಗಳನ್ನು ಪರಿಗಣಿಸಿ, ಪರಿಷ್ಕೃತ ಮೆರಿಟ್ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಫೆ.12ರಂದು ಪ್ರಕಟಿಸಲಾಗಿದೆ.

ಪಿಯು ಉಪನ್ಯಾಸಕರ ನೇಮಕಾತಿ: ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕಾತಿ ಸಂಬಂಧ ಫೆ.23, 24, 25 ಮತ್ತು 26ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ಉದ್ದೇಶಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮುಂದೂಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News