×
Ad

ದಲಿತ ವಿದ್ಯಾರ್ಥಿ ಹತ್ಯೆ ಪ್ರಕರಣ: ಅಲಹಾಬಾದ್ ವಿ.ವಿ.ಯಲ್ಲಿ ಪೊಲೀಸ್, ಆರ್‌ಎಎಫ್ ನಿಯೋಜನೆ

Update: 2018-02-13 22:17 IST

ಹೊಸದಿಲ್ಲಿ, ಫೆ. 13: ಇಪ್ಪತ್ತಾರು ವರ್ಷದ ಎಲ್‌ಎಲ್‌ಬಿ ವಿದ್ಯಾರ್ಥಿ ದಿಲೀಪ್ ಸರೋಜ್ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಒಂದು ದಿನದ ಬಳಿಕ ಮಂಗಳವಾರ ಅಲಹಾಬಾದ್ ವಿಶ್ವವಿದ್ಯಾನಿಲಯದಲ್ಲಿ ಪೊಲೀಸ್ ಹಾಗೂ ಕ್ಷಿಪ್ರ ಕಾರ್ಯ ಪಡೆ ನಿಯೋಜಿಸಲಾಗಿದೆ. ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ರಾಜ್ಯ ರಸ್ತೆ ಸಾರಿಗೆ ಬಸ್ಸೊಂದಕ್ಕೆ ಕಲ್ಲುಗಳನ್ನೆಸೆದು ಅನಂತರ ಅದಕ್ಕೆ ಬೆಂಕಿ ಹಚ್ಚಿದರು. ಫೆಬ್ರವರಿ 9ರಂದು ವಿಶ್ವವಿದ್ಯಾನಿಲಯದ ಹೊರಗಿರುವ ರೆಸ್ಟೋರೆಂಟ್ ಒಂದರಲ್ಲಿ ವಾಗ್ವಾದ ನಡೆದ ಹಿನ್ನೆಲೆಯಲ್ಲಿ ಯುವಕರ ಗುಂಪೊಂದು ಪ್ರತಾಪ್‌ಗಢದ ನಿವಾಸಿ ಹಾಗೂ ದಲಿತ ವಿದ್ಯಾರ್ಥಿ ಸರೋಜ್‌ನನ್ನು ಥಳಿಸಿ ಹತ್ಯೆಗೈದಿತ್ತು. ಈ ವೀಡಿಯೊ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆದ ಬಳಿಕ ಪೊಲೀಸರು ಮಂಗಳವಾರ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News