×
Ad

ಬೆಂಗಳೂರು: ಚಾಕೋಲೆಟ್ ಗೋದಾಮಿಗೆ ಆಕಸ್ಮಿಕ ಬೆಂಕಿ

Update: 2018-02-13 23:23 IST

ಬೆಂಗಳೂರು, ಫೆ. 13: ಪರಪ್ಪನ ಅಗ್ರಹಾರದ ಕೂಡ್ಲು ಗೇಟ್ ಬಳಿಯ ಚಾಕೋಲೆಟ್ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ.ಗಳ ನಷ್ಟ ಸಂಭವಿಸಿದೆ.

ರಾತ್ರಿ 10.15 ಸುಮಾರಿಗೆ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿದ್ದು, ದಟ್ಟ ಹೊಗೆ ಹೊರ ಬರುತ್ತಿರುವುದನ್ನು ಗಮನಿಸಿದ ಪಾರ್ಲೆ ಕಂಪನಿ ಸಿಬ್ಬಂದಿ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ, ಗೋದಾಮಿನಲ್ಲಿ ಯಾರು ಇಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.

ಪರಪ್ಪನ ಅಗ್ರಹಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News