ಗೋಸ್ವಾಮಿ ಟ್ವೆಂಟಿ-20 ಪಂದ್ಯಕ್ಕೆ ಅಲಭ್ಯ

Update: 2018-02-13 18:53 GMT

ಹೊಸದಿಲ್ಲಿ, ಫೆ.13: ದಕ್ಷಿಣ ಆಫ್ರಿಕ ತಂಡದ ವಿರುದ್ಧದ ಐದು ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯಗಳ ಸರಣಿಗೆ ಭಾರತದ ಅನುಭವಿ ವೇಗಿ ಜೂಲನ್ ಗೋಸ್ವಾಮಿ ಗಾಯದ ಕಾರಣದಿಂದಾಗಿ ತಂಡದಿಂದ ಹೊರಗುಳಿಯಲಿದ್ದಾರೆ.

 ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವಂತೆ, ಸ್ಥಳೀಯ ವೈದ್ಯರ ಸಲಹೆಯಂತೆ ಜೂಲನ್ ಹಿಮ್ಮಡಿ ನೋವಿನಿಂದ ಬಳಲುತ್ತಿದ್ದಾರೆ. ಎಂಆರ್‌ಐ ತಪಾಸಣೆಗೆ ಒಳಪಡಿಸಲಾಗಿದ್ದು, ಇದರಿಂದ ಅವರಿಗೆ ಗಾಯ ಆಗಿರುವುದು ದೃಢಪಟ್ಟಿದೆ. ಈ ಕಾರಣದಿಂದಾಗಿ ಮಾಜಿ ನಾಯಕಿಯನ್ನು ಟ್ವೆಂಟಿ-20 ಸರಣಿಗೆ ತಂಡದಿಂದ ಕೈ ಬಿಡಲಾಗಿದೆ.

  ‘‘ಗೋಸ್ವಾಮಿಗೆ 2 ವಾರಗಳ ವಿಶ್ರಾಂತಿಯ ಅಗತ್ಯವಿದೆ. ಅವರು ಭಾರತಕ್ಕೆ ವಾಪಸಾದ ಬಳಿಕ ಬೆಂಗಳೂರಿನ ಎನ್‌ಸಿಎಯಲ್ಲಿ ಪುನಶ್ಚೇತನಾ ಶಿಬಿರದಲ್ಲಿ ಭಾಗವಹಿಸಲಿದ್ದಾರೆಂದು ಮೂಲಗಳು ತಿಳಿಸಿವೆ. 5 ಪಂದ್ಯಗಳ ಟ್ವೆಂಟಿ-20 ಸರಣಿ ಮಂಗಳವಾರದಿಂದ ಆರಂಭವಾಗಲಿದೆ ಏಕದಿನ ಸರಣಿಯಲ್ಲಿ ಭಾರತವು 2-1 ಅಂತರದಲ್ಲಿ ಗೆಲುವು ಸಾಧಿಸಿದೆ. ಜೂಲನ್ ಅವರು 200 ವಿಕೆಟ್‌ಗಳನ್ನು ಪಡೆದ ವಿಶ್ವದ ಮೊದಲ ಕ್ರಿಕೆಟ್ ಆಟಗಾರ್ತಿಯಾಗಿ ದಾಖಲೆ ಬರೆದಿದ್ದಾರೆ. ಐಸಿಸಿಯಿಂದ 2007ರ ವರ್ಷದ ಮಹಿಳಾ ಕ್ರಿಕೆಟ್ ಪ್ರಶಸ್ತಿ, ಅರ್ಜುನ ಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿ ಪಡೆದಿರುವ ಗೋಸ್ವಾಮಿ 2002ರಲ್ಲಿ ತನ್ನ ಕ್ರಿಕೆಟ್ ವೃತ್ತಿ ಜೀವನ ಆರಂಭಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News