ಕರ್ನಾಟಕ ಹೈಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕ
Update: 2018-02-14 22:09 IST
ಬೆಂಗಳೂರು, ಫೆ.14: ಕರ್ನಾಟಕ ಹೈಕೋರ್ಟ್‌ನ ನೂತನ ನ್ಯಾಯಮೂರ್ತಿಗಳಾಗಿ ಸಿದ್ದಪ್ಪ ಸುನೀಲ್ ದತ್ ಯಾದವ್, ಬಿ.ಎಂ.ಶ್ಯಾಂ ಪ್ರಸಾದ್, ದೀಕ್ಷಿತ್ ಕೃಷ್ಣ ಪ್ರಸಾದ್, ಶಂಕರ ಗಣಪತಿ ಪಂಡಿತ್ ಹಾಗೂ ರಾಮಕೃಷ್ಣ ದೇವದಾಸ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಂಜೆ 5 ಗಂಟೆಗೆ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಐವರು ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಹೈಕೋರ್ಟ್‌ಗೆ 62 ನ್ಯಾಯಮೂರ್ತಿಗಳ ಹುದ್ದೆಗಳು ಮಂಜೂರಾಗಿದ್ದು, ಈವರೆಗೆ ಕೇವಲ 24 ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದರು. ಫೆ.5ರಂದು ಮುಖ್ಯ ನ್ಯಾಯಮೂರ್ತಿ, ಫೆ.9ರಂದು ಐವರು ನೂತನ ನ್ಯಾಯಮೂರ್ತಿಗಳ ನೇಮಕಗೊಂಡಿದ್ದರು. ಇದರಿಂದ ನ್ಯಾಯಮೂರ್ತಿಗಳ ಸಂಖ್ಯೆ 30ಕ್ಕೆ ತಲುಪಿದೆ. ಇನ್ನು 32 ನ್ಯಾಯಮೂರ್ತಿಗಳ ಹುದ್ದೆಗಳು ಖಾಲಿಯಿವೆ.