ಕೊಳ್ಳೇಗಾಲ: 45 ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕರಿಂದ ಚಾಲನೆ

Update: 2018-02-14 17:44 GMT

ಕೊಳ್ಳೇಗಾಲ,ಫೆ.14: ತಾಲೂಕಿನ ಹೊಸಮಾಲಂಗಿ ಗ್ರಾಮದಲ್ಲಿ ಸುಮಾರು 45 ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಎಸ್.ಜಯಣ್ಣ ಅವರು ಬುಧವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು. ಹೊಸಮಾಲಂಗಿ ಗ್ರಾಮದಲ್ಲಿ ಪರಿಶಿಷ್ಟ ಜನಾಂಗದ ಬಡಾವಣೆಯಲ್ಲಿ ಎಸ್‍ಸಿಪಿ ಯೋಜನೆಯಡಿ 25 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿ ಹಾಗೂ ನಾಯಕರ ಬಡಾವಣೆಯಲ್ಲಿ ಟಿಎಸ್‍ಪಿ ಯೋಜನೆಯಡಿ 20 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದ ಅವರು, ಗುಣಮಟ್ಟದ ಕಾಮಗಾರಿಯನ್ನು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಾ.ಪಂ ಉಪಾಧ್ಯಕ್ಷೆ ಲತಾರಾಜಣ್ಣ, ಗ್ರಾ.ಪಂ ಅಧ್ಯಕ್ಷ ಲಿಂಗರಾಜು, ಎಪಿಎಂಸಿ ಸದಸ್ಯ ಬಸವಣ್ಣ, ನಾಗರಾಜು, ಶಿವಕುಮಾರ್, ಮುಡಿಗುಂಡ ಶಾಂತರಾಜು ಮಲ್ಲನಾಯಕ, ವರದರಾಜು ಹಾಗೂ ಗ್ರಾಮಸ್ಥರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News