ಬೆಂಗಳೂರು: ಪೌರಕಾರ್ಮಿಕರ ಮಹಾಸಂಘದಿಂದ ಸರಕಾರಕ್ಕೆ ಅಭಿನಂದನೆ

Update: 2018-02-14 18:34 GMT

ಬೆಂಗಳೂರು, ಫೆ.14: ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು, ಗುತ್ತಿಗೆ ಮೇಲ್ವಿಚಾರಕರಿಗೆ ಬಯೋಮೆಟ್ರಿಕ್ ಮುಖಾಂತರ ನೇರವಾಗಿ ವೇತನ ನೀಡುವ ಬಗ್ಗೆ ಆದೇಶಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಕೆ.ಜೆ.ಜಾರ್ಜ್ ರಿಗೆ ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘ ಅಭಿನಂದನೆ ಸಲ್ಲಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ನಗರ ಜಿಲ್ಲಾ ಅಧ್ಯಕ್ಷ ಪಿ.ಎನ್.ಮುತ್ಯಾಲಪ್ಪ, ಹಲವು ವರ್ಷಗಳಿಂದ ಗುತ್ತಿಗೆ ಪದ್ಧತಿ ಆಧಾರದಲ್ಲಿ ಕೆಲಸ ಮಾಡಲಾಗುತ್ತಿದೆ. ಯಾವುದೇ ರೀತಿಯ ಮೂಲಭೂತ ಸೌಕರ್ಯಗಳು, ಕನಿಷ್ಠ ವೇತನವನ್ನು ಸರಿಯಾದ ಸಮಯಕ್ಕೆ ಪೌರಕಾರ್ಮಿಕರಿಗೆ, ಮೇಸ್ತ್ರಿಗಳಿಗೆ ಗುತ್ತಿಗೆದಾರರು ನೀಡುತ್ತಿರಲಿಲ್ಲ. ಇದನ್ನು ಗುರುತಿಸಿ ರಾಜ್ಯಮಟ್ಟದಲ್ಲಿ ರಾಜ್ಯ ಸರಕಾರ ಪೌರಕಾರ್ಮಿಕರಿಗೆ, ಮೇಲ್ವಿಚಾರಕರಿಗೆ ಸ್ವತಂತ್ರವಾಗಿ ಬದುಕಲು ಅವಕಾಶ ಕಲ್ಪಿಸಿರುವುದಕ್ಕೆ ಅಭಿನಂದನೆಗಳು ಸಲ್ಲಿಸುತ್ತೇವೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News