ಕಾವೇರಿ ತೀರ್ಪಿಗೆ ಕ್ಷಣಗಣನೆ: ಇಂದು ಸುಪ್ರೀಂಕೋರ್ಟಿನಿಂದ ಅಂತಿಮ ತೀರ್ಪು

Update: 2018-02-16 04:42 GMT

ಹೊಸದಿಲ್ಲಿ, ಫೆ.16: ಅತ್ಯಂತ ಮಹತ್ವದ, ಎರಡು ಶತಮಾನದ ವಿವಾದವಾಗಿರುವ ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿ ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಶುಕ್ರವಾರ ಬೆಳಗ್ಗೆ ಮಹತ್ವದ ತೀರ್ಪು ನೀಡಲಿದೆ.

  2007ರಲ್ಲಿ ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿ ಕಾವೇರಿ ನದಿ ನೀರು ನ್ಯಾಯಾಧೀಕರಣ ನೀಡಿದ್ದ ತೀರ್ಪಿನ ವಿರುದ್ಧ ಕರ್ನಾಟಕ, ತಮಿಳುನಾಡು ಹಾಗೂ ಕೇರಳ ಮೇಲ್ಮನವಿ ಸಲ್ಲಿಸಿವೆ. ಮೇಲ್ಮನವಿಯ ಬಗ್ಗೆ ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದೆ.

 ಕಾವೇರಿ ತೀರ್ಪಿನ ಹಿನ್ನೆಲೆಯಲ್ಲಿ ತಮಿಳುನಾಡಿಗೆ ತೆರಳಬೇಕಾಗಿದ್ದ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಬೆಂಗಳೂರಿನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News