ತೆಂಕನಿಡಿಯೂರು: ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಉಡುಪಿ, ಫೆ.16: ಜಮೀಯ್ಯತುಲ್ ಫಲಾಹ್ ಉಡುಪಿ ಘಟಕ, ಉಡುಪಿ ಲೋಂಬಾರ್ಡ್ ಸ್ಮಾರಕ ಮಿಷನ್ ಆಸ್ಪತ್ರೆ, ವೈದ್ಯಕೀಯ ಪ್ರತಿನಿಧಿಗಳ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಅಂಧತ್ವ ನಿವಾರಣಾ ವಿಭಾಗ, ಕೆಳಾರ್ಕಳಬೆಟ್ಟು ವಿಷ್ಣುಮೂರ್ತಿ ನಗರದ ಬಿ.ಆರ್.ಅಂಬೇಡ್ಕರ್ ಅಟೋ ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘದ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಇತ್ತೀಚೆಗೆ ತೆಂಕನಿಡಿಯೂರು ಗ್ರಾಪಂ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿತ್ತು.
ಅಧ್ಯಕ್ಷತೆಯನ್ನು ಜಮೀಯ್ಯತುಲ್ ಫಲಾಹ್ ಉಡುಪಿ ಘಟಕದ ಅಧ್ಯಕ್ಷ ಖತೀಬ್ ಅಬ್ದುಲ್ ರಶೀದ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತೆಂಕನಿಡಿ ಯೂರು ಗ್ರಾಪಂ ಅಧ್ಯಕ್ಷ ಜಯಕುಮಾರ್ ಬೆಳ್ಕಳೆ, ತೆಂಕನಿಡಿಯೂರು ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಹೆಗ್ಡೆ, ಮಿಷನ್ ಆಸ್ಪತ್ರೆಯ ವೈದ್ಯ ಡಾ.ವೆಲೆಂಟಿನಾ ಡಿಸೋಜ, ರಿಕ್ಷಾ ಚಾಲಕರ ಸಂಘದ ಗಣೇಶ್ ಕೆ., ವೈದ್ಯಕೀಯ ಪ್ರತಿನಿಧಿಗಳ ಸಂಘದ ಜಿಲ್ಲಾ ಕಾರ್ಯದರ್ಶಿ ಶ್ರೀನಾಥ್, ರಾಘವೇಂದ್ರ ಪ್ರಭು, ರೋಹಿ ರತ್ನಾಕರ್, ಮಧುಸೂದನ್ ಹೇರೂರು, ಗರಡಿಮಜಲು ಅಲ್ ಫಲಾಹ್ ಕ್ಲಿನಿಕ್‌ನ ವೈದ್ಯ ಡಾ.ಪಹೀಮ್ ಭಾಗವಹಿಸಿದ್ದರು.
ಜಮೀಯ್ಯತುಲ್ ಫಲಾಹ್ ಕೋಶಾಧಿಕಾರಿ ಸಮೀರ್ ಎಂ. ವಂದಿಸಿದರು. ಕಾರ್ಯದರ್ಶಿ ಕಾಸಿಂ ಬಾರಕೂರು ಕಾರ್ಯಕ್ರಮ ನಿರೂಪಿಸಿದರು. ಜತೆ ಕಾರ್ಯದರ್ಶಿ ಮುಶೀರ್ ಶೇಖ್, ರಿಕ್ಷಾ ಚಾಲಕ ಮತ್ತು ಮಾಲಕ ಸಂಘದ ಮುಹಮ್ಮದ್ ಶರೀಪ್ ಸಹಕರಿಸಿದರು.
ನೂರಕ್ಕೂ ಅಧಿಕ ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು. ಉಚಿತ ರಕ್ತ ಪರೀಕ್ಷೆ, ಇಸಿಜಿ, ಕಣ್ಣಿನ ಪರೀಕ್ಷೆ, ಸಾಮಾನ್ಯ ಆರೋಗ್ಯ ಹಾಗೂ ಸ್ತ್ರೀರೋಗದ ಬಗ್ಗೆ ತಪಾಸಣೆ ನಡೆಸಲಾಯಿತು. 10ಕ್ಕೂ ಅಧಿಕ ಮಂದಿ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. 3 ಮಂದಿಗೆ ಉಚಿತ ಕನ್ನಡಕ ನೀಡಲಾಯಿತು.