ರೇಷ್ಮೆ ಇಲಾಖೆಗೆ 457 ಕೋಟಿ ಅನುದಾನ ಹಂಚಿಕೆ

Update: 2018-02-16 17:00 GMT

ಬೆಂಗಳೂರು, ಫೆ. 16: ರೇಷ್ಮೆ ಕೃಷಿಯನ್ನು ಅಭಿವೃದ್ಧಿ ಪಡಿಸುವ ಹಾಗೂ ರೇಷ್ಮೆ ಬೆಳೆಗಾರರಿಗೆ ನೆರವಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2018-19 ನೆ ಸಾಲಿನ ರಾಜ್ಯ ಬಜೆಟ್‌ನಲ್ಲಿ ರೇಷ್ಮೆ ಇಲಾಖೆಗೆ 457 ಕೋಟಿ ಅನುದಾನ ಹಂಚಿಕೆ ಮಾಡಿದ್ದಾರೆ.

ಕೇಂದ್ರ ರೇಷ್ಮೆ ಮಂಡಳಿಯ ಸಹಯೋಗದೊಂದಿಗೆ ಇಲಾಖೆಯು ಬೆಂಗಳೂರು, ಮೈಸೂರು ಕಾರಿಡಾರ್‌ನಲ್ಲಿ ರೇಷ್ಮೆ ಟೂರಿಸಂ ಅನ್ನು ಅಭಿವೃದ್ಧಿ ಪಡಿಸಲು ಉದ್ದೇಶಿಸಿದೆ. ಅಂತಾರಾಷ್ಟ್ರೀಯ ಮಟ್ಟದ ಲೈವ್ ಮ್ಯೂಸಿಯಂ ಅನ್ನು ಚನ್ನಪಟ್ಟಣದ ರೇಷ್ಮೆ ಕೃಷಿ ಕ್ಷೇತ್ರದಲ್ಲಿ ಸ್ಥಾಪಿಸಲಾಗುತ್ತಿದೆ.

* ತಲಘಟ್ಟಪುರದ ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಹಿಪ್ಪುನೇರಳೆ ಕೃಷಿ ಚಟುವಟಿಕೆಯಿಂದ ರೇಷ್ಮೆ ವಸ್ತ್ರ ತಯಾರಿಸುವವರೆಗಿನ ಕೌಶಲ್ಯ ಮ್ಯೂಸಿಯಂ ಅನ್ನು ಅಭಿವದ್ಧಿ ಪಡಿಸಲಾಗುವುದು.

* ಬಿಳಿಗಿರಿರಂಗನ ಬೆಟ್ಟ ಪ್ರದೇಶದಲ್ಲಿ ರೇಷ್ಮೆ ಇಲಾಖೆ ಹಾಗೂ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಉಪಕೇಂದ್ರದ ವ್ಯಾಪ್ತಿಯಲ್ಲಿ 40 ಎಕರೆ ವಿಸ್ತೀರ್ಣದ ಜಮೀನು ಲಭ್ಯವಿದೆ. ಇದರಲ್ಲಿ ಹಿಪ್ಪುನೇರಳೆ ಮರ ಕೃಷಿ ಅಭಿವೃದ್ಧಿ ಪಡಿಸಿ ಸೋಲಿಗ ಜನಾಂಗಕ್ಕೆ ಪ್ರಯೋಜನವಾಗುವಂತೆ ಕಡಿಮೆ ವೆಚ್ಚದ ರೇಷ್ಮೆ ಹುಳು ಸಾಕಾಣಿಕೆ ಶೆಡ್‌ಗಳನ್ನು ನಿರ್ಮಿಸಿ ದ್ವಿತಳಿ ರೇಷ್ಮೆ ಹುಳು ಸಾಕಾಣಿಕೆ ಮಾಡಲು ಉದ್ದೇಶಿಸಲಾಗಿದೆ.

* 2018-19ನೇ ಸಾಲಿನಲ್ಲಿ ರೇಷ್ಮೆ ಇಲಾಖೆಗೆ ಒಟ್ಟಾರೆಯಾಗಿ 457 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News