ಸಹಕಾರ ಇಲಾಖೆ: ಸಹಕಾರ ಸಂಘಗಳಲ್ಲಿ ಸಾಲ ಪಡೆದ ರೈತ ಮೃತಪಟ್ಟರೆ ಸಾಲ ಮನ್ನಾ

Update: 2018-02-16 17:58 GMT

ಬೆಂಗಳೂರು, ಫೆ. 16: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಬೆಳೆ ಸಾಲ ಪಡೆದ ರೈತ ಸದಸ್ಯರು ನಿಧನ ಹೊಂದಿದಲ್ಲಿ ಅವರ ಒಂದು ಲಕ್ಷ ರೂ.ವರೆಗಿನ ಸಾಲವನ್ನು ಮನ್ನಾ ಮಾಡುವ ಯೋಜನೆಯನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

* ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್, ಧಾರವಾಡ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ವಿಜಯಪುರ ಬ್ಯಾಂಕುಗಳ ಶತಮಾನೋತ್ಸವದ ಅಂಗವಾಗಿ ನಿರ್ಮಾಣ ಮಾಡುವ ಕಟ್ಟಡಕ್ಕೆ ತಲಾ 5 ಕೋಟಿ ರೂ.ಗಳಂತೆ ಸರಕಾರ ಮತ್ತು ಅಪೆಕ್ಸ್ ಬ್ಯಾಂಕ್ ವತಿಯಿಂದ ಸಹಾಯಧನವನ್ನು ನೀಡಲಾಗುವುದು.

* ರೈತರ ಉತ್ಪನ್ನಗಳಿಗೆ ಹೆಚ್ಚಿನ ಧಾರಣೆ ದೊರಕಿಸಲು ಆಯ್ದ 25 ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ದ್ವಿದಳ ಧಾನ್ಯ, ಎಣ್ಣೆ ಬೀಜಗಳು ಹಾಗೂ ಆಹಾರ ಧಾನ್ಯಗಳ ಗುಣವಿಶ್ಲೇಷಣ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುತ್ತಿದೆ. ಈ ಯೋಜನೆಯಲ್ಲಿ ಪ್ರತಿ ಸಮಿತಿಗೆ 10 ಲಕ್ಷ ರೂ. ವೆಚ್ಚದಂತೆ 2.50 ಕೋಟಿ ರೂ.ಗಳನ್ನು ಒದಗಿಸಲಾಗುವುದು.

* ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಕೆಲಸ ಮಾಡುತ್ತಿರುವ ಹಮಾಲರಲ್ಲಿ ವಸತಿರಹಿತ 1ಸಾವಿರ ಜನರನ್ನು ಗುರುತಿಸಿ ಸರಕಾರದ ವಿವಿಧ ವಸತಿ ಯೋಜನೆಗಳಡಿ ಆದ್ಯತೆ ಮೇಲೆ ವಸತಿ ಸೌಲಭ್ಯವನ್ನು ಕಲ್ಪಿಸಲಾಗುವುದು.

* 2018-19ನೆ ಸಾಲಿನಲ್ಲಿ ಸಹಕಾರ ಇಲಾಖೆಗೆ ಒಟ್ಟಾರೆಯಾಗಿ 5,837 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News