ರಾಜಸ್ಥಾನ: ಸಿಲಿಂಡರ್ ಸ್ಫೋಟ; 9 ಮಂದಿ ಬಲಿ

Update: 2018-02-17 16:24 GMT

 ಪೆ. 17: ಇಲ್ಲಿನ ಬೀವಾರ್ ಪಟ್ಟಣದ ವಿವಾಹ ಸಮಾರಂಭವೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂವರು ಮಕ್ಕಳು ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ ಹಾಗೂ 19 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿನ ಹೋಟೆಲ್ ಒಂದರಲ್ಲಿ ಶುಕ್ರವಾರ ರಾತ್ರಿ ವಿವಾಹದ ಕಾರ್ಯಕ್ರಮ ನಡೆಯುತ್ತಿದ್ದಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿತು. ಸ್ಫೋಟದಿಂದ ಕಟ್ಟಡಕ್ಕೆ ಗಂಭೀರ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಗೌರವ್ ಗೋಯಲ್ ತಿಳಿಸಿದ್ದಾರೆ. ಮೃತಪಟ್ಟ 9 ಮಂದಿಯ ಮೃತದೇಹ ಪತ್ತೆಯಾಗಿದೆ. ಗಾಯಗೊಂಡ ಐವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರು ನಾಪತ್ತೆಯಾಗಿದ್ದಾರೆ. ಅವರ ಶೋಧ ಕಾರ್ಯಾ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News