ಫೆ.20 ರಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವ

Update: 2018-02-17 13:29 GMT

ಬೆಂಗಳೂರು, ಫೆ.17: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವವನ್ನು ಫೆ.20ರಂದು ನಗರದ ಕೆ.ಆರ್.ರಸ್ತೆಯ ಕುವೆಂಪು ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ.

ಶನಿವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಡಾ.ಪದ್ಮಾಶೇಖರ್ ಮಾತನಾಡಿ, ಘಟಿಕೋತ್ಸವದಲ್ಲಿ ರಾಜ್ಯಪಾಲ ವಜುಭಾಯಿ ವಾಲ, ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು.

2015 ರಿಂದ 17ನೆ ಸಾಲಿನ ಬಿಎ, ಎಂಎ, ಎಂಫಿಲ್ ಪದವಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನಿ ಮಾಡಲಾಗುತ್ತದೆ. ಸಂಸ್ಕೃತ, ಕನ್ನಡ ಭಾಷೆಯಲ್ಲಿ 40ಕ್ಕೂ ಹೆಚ್ಚು ಕೃತಿಗಳು ಸೇರಿದಂತೆ ನೂರಾರು ಲೇಖನ ಬರೆದಿರುವ ವಿದ್ವಾನ್ ರಾಜಶೇಖರಯ್ಯ ಅವರಿಗೆ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News