ಬೆಂಗಳೂರು: ಫೆ.21ರಂದು ವಿವಿಧ ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

Update: 2018-02-17 14:41 GMT

ಬೆಂಗಳೂರು, ಫೆ.21: ಬೆಂಗಳೂರು ಪೂರ್ವ ತಾಲೂಕಿನಲ್ಲಿ ಅಕ್ರಮವಾಗಿ ವಾಸವಿರುವ ಬಾಂಗ್ಲಾ ನುಸುಳುಕೋರರನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಫೆ.21ರಂದು ಆವಲಹಳ್ಳಿ ಪೊಲೀಸ್‌ಠಾಣೆ ಮುಂದೆ ವಿವಿಧ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿವೆ.

ಶನಿವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಡಾ.ವೆಂಕಟೇಶ್ ಮೌರ್ಯ, 35 ಸಾವಿರಕ್ಕೂ ಹೆಚ್ಚು ಬಾಂಗ್ಲಾ ನುಸುಳುಕೋರರು ಬೆಂಗಳೂರು ಪೂರ್ವ ತಾಲೂಕಿನ ಮಹದೇವಪುರ ವಿಧಾನಸಭಾ ಕ್ಷೇತ್ರದ ಆವಲಹಳ್ಳಿ, ಮಾರತ್‌ಹಳ್ಳಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ವಾಸಿಸುತ್ತಿದ್ದಾರೆ. ಅಲ್ಲದೆ, ಅವರಿಗೆ ಅಕ್ರಮವಾಗಿ ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್ ವಿತರಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಬಾಂಗ್ಲಾಪ್ರಜೆಗಳಿಗೆ ಗುಡಿಸಲುಗಳನ್ನು ನಿರ್ಮಿಸಿ, ಸರಕಾರಿ ದಾಖಲೆ ಮಾಡಿಕೊಡಲು ಕೆಲವು ಸ್ಥಳೀಯ ನಾಯಕರು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ದೇಶದ ನಾಗರಿಕತ್ವ ಇಲ್ಲದ ಅಕ್ರಮ ವಲಸಿಗರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News