ಪಡುಬಿದ್ರೆ: ಕೇಂದ್ರದ ಆರ್ಥಿಕ ನೀತಿ ವಿರುದ್ಧ ಇಂಟೆಕ್ ಪ್ರತಿಭಟನೆ

Update: 2018-02-17 16:24 GMT

ಪಡುಬಿದ್ರೆ, ಫೆ. 17: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಉಡುಪಿ ಜಿಲ್ಲಾ ಇಂಟೆಕ್ ವತಿಯಿಂದ ಪಡುಬಿದ್ರೆ ಪೇಟೆಯಲ್ಲಿ ಶನಿವಾರ ಸಂಜೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ, ಕೇಂದ್ರ ಸರ್ಕಾರವು ಕಾರ್ಮಿಮಿಕರ, ರೈತರ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂಧನೆ ನೀಡದೆ ಕೇವಲ ಉದ್ಯಮಿಗಳ ಪರವಾಗಿರುವ ಸರ್ಕಾರವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ನೀತಿಯಿಂದಾಗಿ ದೇಶದ ಆರ್ಥಿಕತೆಗೆ ಪೆಟ್ಟು ಬಿದ್ದಿದೆ.
ಜನರಿಗೆ ವಿವಿಧ ರೀತಿಯ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರವು ಯಾವುದೇ ರೀತಿಯ ಭರವಸೆಗಳನ್ನು ಈಡೇರಿಸಲಿಲ್ಲ. ಬೆಳೆ ಏರಿಕೆಯನ್ನು ತಡೆಯುವುದಾಗಿ ಹೇಳಿದ್ದ ಮೋದಿಯವರು ಇತ್ತೀಚಿನ ದಿನಗಳಲ್ಲಿ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾದರೂ ಅದನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ ಎಂದು ದೂರಿದರು.

ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನವೀನ್‌ಚಂದ್ರ ಜೆ.ಶೆಟ್ಟಿ, ಇಂಟೆಕ್ ಜಿಲ್ಲಾಧ್ಯಕ್ಷ ಗಣೇಶ್ ಕೋಟ್ಯಾನ್, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ದಿನೇಶ್ ಫಲಿಮಾರು, ಯು.ಶೇಖಬ್ಬ, ರೇಣುಕಾ, ಕಾಪು ಪುರಸಭಾ ಅಧ್ಯಕ್ಷೆ ಮಾಲಿನಿ, ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಮಯಂತಿ ಅಮೀನ್, ಯತೀಶ್ ಕರ್ಕೇರ, ಎಚ್.ಅಬ್ದುಲ್ಲಾ, ಮೆಲ್ವಿನ್ ಡಿಸೋಜ, ಅಶೋಕ್ ಪಡುಬಿದ್ರಿ, ಹಸನ್ ಕಂಚಿನಡ್ಕ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News