ಏ.29: ಧರ್ಮಸ್ಥಳದಲ್ಲಿ 47ನೆ ವರ್ಷದ ಉಚಿತ ಸಾಮೂಹಿಕ ವಿವಾಹ

Update: 2018-02-17 16:28 GMT

ಬೆಳ್ತಂಗಡಿ, ಫೆ. 17:  ಧರ್ಮಸ್ಥಳದಲ್ಲಿ ಏ 29 ರಂದು ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 47ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. 

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಲ ಸೂತ್ರವನ್ನು ನೀಡಲಾಗುವುದು. ಯಾವುದೇ ಸಂದರ್ಭದಲ್ಲಿ ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೆ ಭರಿಸಲಾಗುವುದು.

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ  ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತದೆ. ಕಳೆದ ವರ್ಷದ ವರೆಗೆ 12,029 ಜೊತೆ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 25ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.–ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256  277144.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News