ಅಕ್ರಮ ಜಿಂಕೆ ಚರ್ಮ ಸಾಗಾಟ: ಸೊತ್ತು ಸಹಿತ ಇಬ್ಬರ ಬಂಧನ

Update: 2018-02-17 16:33 GMT

ಮಂಗಳೂರು, ಫೆ. 17: ಮಂಗಳೂರು ಅರಣ್ಯ ಸಂಚಾರಿ ದಳದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು ಫೆ.15ರಂದು ಉಡುಪಿ ತಾಲೂಕಿನ ಸಾಸ್ತಾನ ಟೋಲ್ ಗೇಟ್ನಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಅಕ್ರಮ ಸಾಗಾಟ ಮಾಡುತ್ತಿದ್ದ ಜಿಂಕೆ ಚರ್ಮವನ್ನು ವಶಕ್ಕೆ ಪಡೆದು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.

ಕುಂದಾಪುರ ಕಡೆಯಿಂದ ಬರುತ್ತಿದ್ದ ಮೋಟಾರ್ ಸೈಕಲ್ನಲ್ಲಿ ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ಒಂದು ಜಿಂಕೆ ಚರ್ಮವನ್ನು ಮಾರಾಟಕ್ಕಾಗಿ ಸಾಗಾಟ ಮಾಡುತ್ತಿದು ದನ್ನು ಪತ್ತೆ ಹಚ್ಚಿದ್ದಾರೆ. ಆರೋಪಿಗಳಾದ ಸಾಗರದ ಮೋಹನ ಕುಮಾರ (22) ಮತ್ತು ಗಂಗೊಳ್ಳಿಯ ವಿಕ್ರಮ (24)ರನ್ನು ದಸ್ತಗಿರಿ ಮಾಡಿ ಜಿಂಕೆ ಚರ್ಮ ಮತ್ತು ಮೋಟಾರ್ ಸೈಕಲ್ ಸ್ವಾಧೀನಪಡಿಸಿಕೊಂಡಿದ್ದಾರೆ. ಮುಂದಿನ ತನಿಖೆಗಾಗಿ ಉಡುಪಿ ವಲಯಾರಣ್ಯಾಧಿಕಾರಿಯವರಿಗೆ ಹಸ್ತಾಂತರಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಮಡಿಕೇರಿ ಸಿ.ಐ.ಡಿ. ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಎಚ್.ಆರ್.ಧರಣೇಂದ್ರ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸುಧಾಕರ್ ಜಿ. ತೋನ್ಸೆ ಹಾಗೂ ಸಿಬ್ಬಂದಿಗಳಾದ ಪ್ರವೀಣ ಜೆ, ಉದಯ ನಾಯ್ಕ ಎನ್., ಮಹೇಶ ಟಿ., ದೇವರಾಜ್ ಹಾಗೂ ಸುಂದರ ಶೆಟ್ಟಿ ಅವರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News