×
Ad

ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಮೌನವೇಕೆ: ಸಿದ್ದರಾಮಯ್ಯ ಪ್ರಶ್ನೆ

Update: 2018-02-18 20:55 IST

ರಾಯಚೂರು, ಫೆ.18: ಕೇಂದ್ರ ಸರಕಾರದ ಭ್ರಷ್ಟಾಚಾರದ ಪ್ರಕರಣಗಳು ಹೊರ ಬರುತ್ತಿದ್ದಂತೆ ಪ್ರಧಾನಿ ನರೇಂದ್ರಮೋದಿ ಮೌನವಹಿಸುತ್ತಾರೆ. ಅವರು ನಮ್ಮಂತೆ ಜನ ಸಾಮಾನ್ಯರ ಕೈಗೆ ಸಿಗುತ್ತಾರೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ರವಿವಾರ ನಗರದ ಮಸ್ಕಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರಮೋದಿ ದೇಶದ ಜನರಿಗೆ ಬ್ಯಾಂಕಿನಲ್ಲಿ ಹಣ ಇಡಲು ಹೇಳುತ್ತಾರೆ. ಆದರೆ, ನೀರವ್ ಮೋದಿಯಂಥಹವರು ಬ್ಯಾಂಕಿನಲ್ಲಿದ್ದ ಹಣವನ್ನು ಯಾರಿಗೂ ತಿಳಿಯದಂತೆ ತೆಗೆದುಕೊಂಡು ಹೋಗಿ ಬಿಡುತ್ತಾರೆ ಎಂದರು.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಡೆದಿರುವ ಅಕ್ರಮದ ಬಗ್ಗೆ ಪ್ರಧಾನಿ ಯಾಕೆ ಎಲ್ಲಿಯೂ ಮಾತನಾಡಿಲ್ಲ. ಈ ಪ್ರಕರಣದ ಕುರಿತು ಮೋದಿ ತಮ್ಮ ಮೌನವನ್ನು ಮುರಿದು ಮಾತನಾಡಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಕಾಂಗ್ರೆಸ್ ಮುಖಂಡ ಅಭಿಷೇಕ್ ಸಿಂಘ್ವಿಗೂ ನೀರವ್ ಮೋದಿಗೂ ಯಾವುದೆ ಸಂಬಂಧವಿಲ್ಲ. ಇದರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಅವರು ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News