ದೇವಸ್ಥಾನಗಳ ವ್ಯವಸ್ಥಾಪನ ಸಮಿತಿಗೆ ಅರ್ಜಿ ಆಹ್ವಾನ

Update: 2018-02-18 17:50 GMT

ಉಡುಪಿ, ಫೆ.18: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಕಾಯ್ದೆ ಅಧಿನಿಯಮ 1997ರ ಕಲಂ 25ರನ್ವಯ ಉಡುಪಿ ಜಿಲ್ಲೆಯಲ್ಲಿರುವ ಸಿ ಪ್ರವರ್ಗದ ಅಧಿಸೂಚಿತ ಸಂಸ್ಥೆಗಳು, ದೇವಸ್ಥಾನ ಗಳಿಗೆ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಕ್ತಾಧಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕನಿಷ್ಟ 25 ವರ್ಷ ಮೇಲ್ಪಟ್ಟು ವಯಸ್ಸಿನ ಆಸಕ್ತ ಭಕ್ತಾಧಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಮಾರ್ಚ್ 2ರೊಳಗೆ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಯ ದತ್ತಿಗಳ ಇಲಾಖೆ ಉಡುಪಿ ಜಿಲ್ಲೆ ಕೊಠಡಿ ಸಂಖ್ಯೆ 206 ಬಿ ಬಾಕ್ಲ್ ಮೊದಲನೆ ಮಹಡಿ, ಜಿಲ್ಲಾಧಿಕಾರಿ ಕಚೇರಿಗಳ ಸಂಕೀರ್ಣ, ರಜತಾದ್ರಿ ಮಣಿಪಾಲ ಇಲ್ಲಿಗೆ ಸಲ್ಲಿಸಬೇಕು ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News