ಹಾರಿಸ್ ಪುತ್ರ ಮುಹಮ್ಮದ್ ನಲಪಾಡ್‌ಗೆ ಐಪಿಸಿ ಸೆಕ್ಷನ್ 307 ಕೇಸ್ ದಾಖಲು

Update: 2018-02-19 08:02 GMT

 ಬೆಂಗಳೂರು, ಫೆ.19: ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ. ಹಾರಿಸ್ ಪುತ್ರ ಮುಹಮ್ಮದ್ ನಲಪಾಡ್ ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಗೆ ಸೋಮವಾರ ಬೆಳಗ್ಗೆ ಶರಣಾಗಿದ್ದು, ಠಾಣೆಯ ಪೊಲೀಸರು ನಲಪಾಡ್ ವಿರುದ್ಧ ಐಪಿಸಿ ಸೆಕ್ಷನ್ 307(ಹತ್ಯೆ ಯತ್ನ) ಅಡಿ ಪ್ರಕರಣ ದಾಖಲಿಸಿದ್ದಾರೆ.

ಫೆ.17 ರಂದು ವ್ಯಕ್ತಿಯೊಬ್ಬನಿಗೆ ಗಂಭೀರ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಲಪಾಡ್‌ಗಾಗಿ ಪೊಲೀಸರು ರವಿವಾರ ಬೆಳಗ್ಗೆಯಿಂದ ಶೋಧ ಕಾರ್ಯ ನಡೆಸಿದ್ದರು. 37 ಗಂಟೆಗಳ ಕಾಲ ತಲೆಮರೆಸಿಕೊಂಡಿದ್ದ ನಲಪಾಡ್ ಕೊನೆಗೂ ಆಟೋ ರಿಕ್ಷಾದಲ್ಲಿ ಪೊಲೀಸ್ ಸ್ಟೇಶನ್‌ಗೆ ಬಂದು ಶರಣಾಗಿದ್ದಾರೆ.

ಹಾರಿಸ್ ಪುತ್ರ ಮುಹಮ್ಮದ್ ನಲಪಾಡ್ ತನ್ನ ಹತ್ತು ಜನರ ಸ್ನೇಹಿತರ ಜೊತೆಗೂಡಿ ಶನಿವಾರ ರಾತ್ರಿ ಯುಬಿ ಸಿಟಿಯ ರೆಸ್ಟೊರೆಂಟ್‌ವೊಂದರಲ್ಲಿ ಡಾಲರ್ಸ್ ಕಾಲನಿ ನಿವಾಸಿ ವಿದ್ವತ್ ಎಂಬಾತನಿಗೆ ಹಿಗ್ಗಾಮುಗ್ಗ ಥಳಿಸಿದ್ದು, ಗಂಭೀರ ಗಾಯಗೊಂಡಿರುವ ವಿದ್ವತ್‌ನನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News