ಉ.ಪ್ರ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

Update: 2018-02-19 13:30 GMT

ಲಕ್ನೊ, ಫೆ.19: ದಲಿತ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಾಂದ ಎಂಬಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

14ರ ಹರೆಯದ ಬಾಲಕಿ ಶನಿವಾರ ರಾತ್ರಿ ಮೂತ್ರ ವಿಸರ್ಜಿಸಲು ಮನೆಯಿಂದ ಹೊರ ಬಂದಿದ್ದಾಗ ಇಬ್ಬರು ವ್ಯಕ್ತಿಗಳು ಆಕೆಯನ್ನು ಅಪಹರಿಸಿ, ಮನೆಯ ಸಮೀಪವಿದ್ದ ಕೊಟ್ಟಿಗೆಯಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮರುದಿನ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಕೆ ಪತ್ತೆಯಾಗಿದ್ದಾಳೆ. ಬಾಲಕಿಯ ತಾಯಿ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ. ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News