ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ’: ಫೆ.20 ರಂದು ಉದ್ಘಾಟನೆ

Update: 2018-02-19 14:10 GMT

ಬೆಂಗಳೂರು, ಫೆ. 19: ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಸ್ಟೌವ್, ಎರಡು ಸಿಲಿಂಡರ್ ಸಹಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ‘ಮುಖ್ಯಮಂತ್ರಿ ಅನಿಲಭಾಗ್ಯ’ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಫೆ.20 ರಂದು ಉದ್ಘಾಟಿಸಲಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ಫೆ.20ರ ಸಂಜೆ 4:30ಕ್ಕೆ ನೂತನ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಆಹಾರ ಸಚಿವ ಯು.ಟಿ.ಖಾದರ್, ನಗರಾಭಿವೃದ್ಧಿ ಸಚಿವ ಆರ್.ರೋಷನ್ ಬೇಗ್ ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News