×
Ad

ಮಂಗಳೂರಿಗೆ ಆಗಮಿಸಿದ ಅಮಿತ್ ಶಾ

Update: 2018-02-19 20:09 IST

ಮಂಗಳೂರು,ಫೆ ,19:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅವರು ಇಂದು ನಿಗದಿಯಾಗಿದ್ದ ಸಮಯಕ್ಕಿಂತ ಎರಡು ಗಂಟೆ ತಡವಾಗಿ ರಾತ್ರಿ 7.40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಕೆಂಜಾರಿನ ವಿಮಾನ ನಿಲ್ದಾಣದ ಬಳಿ ಬಿಜೆಪಿ ಮುಖಂಡರು ಅಮಿತ್ ಶಾ ಅವರಿಗೆ ಸಾಂಪ್ರದಾಯಿಕ ಪೇಟ ತೊಡಿಸಿ ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಅಲ್ಪ ಅನಾರೋಗ್ಯದ ಕಾರಣ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡದೆ ಸಾರ್ವಜನಿಕರತ್ತ ಕೈ ಬೀಸಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ.

ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು,ಸಂಸದ ನಳಿನ್ ಕುಮಾರ್ ಕಟೀಲ್,ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್, ನಾಗರಾಜ ಶೆಟ್ಟಿ, ವಿಧಾನ ಪರಿಷತ್ ಕರ್ನಾಟಕ ವಿಧಾನ ಸಭೆಯ ಮಾಜಿ ಉಪ ಸಭಾಪತಿ ಯೋಗೀಶ್ ಭಟ್, ಜಿಲ್ಲಾ ಪಂಚಾಯತ್ನ್ ಉಪಾಧ್ಯಕ್ಷೆ ಕಸ್ತೂರಿ ಪಂಜ,ಜಿಲ್ಲಾ ಪಂಚಾಯತ್ ಸದಸ್ಯ ಈಶ್ವರ ಕಟೀಲ್, ಬಿಜೆಪಿ ಮುಖಂಡರಾದ ವೇದವ್ಯಾಸ ಕಾಮತ್,ಎಂ.ಬಿ.ಪುರಾಣಿಕ್,ಸತ್ಯಜಿತ್ ಸುರತ್ಕಲ್, ಸುಲೋಚನಾ ಭಟ್,ಜಗದೀಶ್ ಶೇಣವ,ರವಿಶಂಕರ ಮಿಜಾರು,ಡಾ.ವೈ ಭರತ್ ಶೆಟ್ಟಿ,ಜಿತೇಂದ್ರ ಕೊಟ್ಟಾರಿ,ಉಮಾನಾಥ ಕೋಟ್ಯಾನ್ ಮೊದಲಾದವರು ಅಮಿತ್ ಶಾ ರವರನ್ನು ಸ್ವಾಗತಿಸಿದರು.

ಅಮಿತ್ ಶಾ ಇಂದು ರಾತ್ರಿ ಸುಬ್ರಹ್ಮಣ್ಯದಲ್ಲಿ ತಂಗಲಿದ್ದು, ನಾಳೆ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ಬೆಳ್ತಂಗಡಿ,ಬಂಟ್ವಾಳಗಳಲ್ಲಿ ನವಶಕ್ತಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ ಸುರತ್ಕಲ್‌ನ ದೀಪಕ್ ರಾವ್ ನಿವಾಸಕ್ಕೆ ಭೇಟಿ ನೀಡಿ ಬಳಿಕ ಉಡುಪಿಯ ಮಲ್ಪೆಯಲ್ಲಿರುವ ಮೀನುಗಾರರ ಸಮಾವೇಶದಲ್ಲಿ ಭಾಗವಹಿಸಲು ತೆರಳಲಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News