ಪಡುಬಿದ್ರಿ : ಕ್ಯಾನ್ಸರ್ ಪೀಡಿತ ಮಹಿಳೆ ಆತ್ಮಹತ್ಯೆ
Update: 2018-02-19 20:21 IST
ಪಡುಬಿದ್ರಿ,ಫೆ.19: ಮೂರು ವರ್ಷದಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತಿದ್ದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರಿ ಠಾಣೆಯಲ್ಲಿ ದಾಖಲಾಗಿದೆ.
ಅವರಾಲುವಿನ ಲೀಲಾ ಪೂಜಾರ್ತಿ (36) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೂರು ವರ್ಷದಿಂದ ಈಕೆ ಕ್ಯಾನ್ಸರ್ ರೋಗದಿಂದ ಬಳಲುತಿದ್ದರು. ರವಿವಾರ ರಾತ್ರಿ ಊಟ ಮಾಡಿಕೊಂಡ ಮಲಗಿದ್ದ ಈಕೆ, ಬೆಳಗ್ಗೆ ಮನೆಯಿಂದ ನಾಪತ್ತೆಯಾಗಿದ್ದರು. ಹುಡುಕಾಡಿದಾಗ ಮನೆ ಪಕ್ಕದ ಹಳ್ಳದಲ್ಲಿ ಮೈಮೇಲೆ ಸೀಮೆ ಎಣ್ಣೆ ಸುರಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಯಿತು. ಪ್ರಕರಣ ಪಡುಬಿದ್ರಿ ಠಾಣೆಯಲ್ಲಿ ದಾಖಲಾಗಿದೆ. ಪತಿ ಕೂಲಿ ಕೆಲಸ ಮಾಡಿಕೊಂಡಿದ್ದು, ಇಬ್ಬರು ಮಕ್ಕಳಿದ್ದಾರೆ.