ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಪದಕ
Update: 2018-02-19 20:45 IST
ಮಂಗಳೂರು, ಫೆ. 19: ಸರಕಾರಿ ನೌಕರರ ಸಂಘದ ವತಿಯಿಂದ ಬಳ್ಳಾರಿಯಲ್ಲಿ ನಡೆದ ರಾಜ್ಯ ಮಟ್ಟದ ಸಿವಿಲ್ ಸರ್ವಿಸ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ 2018 ರ 73 ಕೆ.ಜಿ. ವಿಭಾಗದಲ್ಲಿ ವಾಣಿಜ್ಯ ತೆರಿಗೆ ನಿರೀಕ್ಷಕ ನಿತಿನ್ ಕುಮಾರ್ ಬಿ.ಕೆ. ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇದೇ ಕ್ರೀಡೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ದ್ವಿತೀಯ ದರ್ಜೆ ಸಹಾಯಕ ಸುಜಿತ್ ಕುಮಾರ್ 93 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಪತ್ರಾಂಕಿತ ವ್ಯವಸ್ಥಾಪಕ ಹೇಮಚಂದ್ರ ಬಬ್ಬುಕಟ್ಟೆ ಅವರು ರಾಜ್ಯ ಮಟ್ಟದ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ 74 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಬಳ್ಳಾರಿಯಲ್ಲಿ ನಡೆದ ರಾಜ್ಯ ಮಟ್ಟದ ಸಿವಿಲ್ ಸರ್ವಿಸ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.