ರೈತ ನಾಯಕ, ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ನಿಧನಕ್ಕೆ ಗಣ್ಯರ ಸಂತಾಪ

Update: 2018-02-19 16:22 GMT

ಮೈಸೂರು,ಫೆ.19: ಸರ್ವೋದಯ ಪಕ್ಷದ ಶಾಸಕರು ಹಾಗೂ ರೈತ ಹೋರಾಟಗಾರರಾದ ಕೆ.ಎಸ್. ಪಟ್ಟಣ್ಣಯ್ಯ ಅವರ ನಿಧನಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಂತಾಪ ಸೂಚಿಸಿದ್ದಾರೆ.

ಪುಟ್ಟಣ್ಣಯ್ಯ ರೈತರ ಮುಖಂಡರಾಗಿ ರೈತರ ಪರವಾಗಿ ಹಲವಾರು ಹೋರಾಟಗಳನ್ನು ಮಾಡಿದ್ದಾರೆ. ಬಡವರ, ಮಹಿಳೆಯರ, ಶೋಷಿತರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ.

ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಂಸದರಾದ ಆರ್. ಧ್ರುವನಾರಾಯಣ್, ಶಾಸಕರಾದ ಕಳಲೆ ಕೇಶವಮೂರ್ತಿ, ಎಂ.ಕೆ.ಸೋಮಶೇಖರ್, ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಹೆಚ್. ಎ. ವೆಂಕಟೇಶ್  ಎಸ್‍ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್, ಅವರು ಸಹ ಕೆ. ಎಸ್. ಪುಟ್ಟಣ್ಣಯ್ಯ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News