ಬೆಂಗಳೂರು-ಮೈಸೂರು ವಿದ್ಯುತ್ ರೈಲು ಮಾರ್ಗಕ್ಕೆ ಚಾಲನೆ
Update: 2018-02-19 23:53 IST
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿದ್ಯುದೀಕರಣಗೊಂಡ ಬೆಂಗಳೂರು-ಮೈಸೂರು ರೈಲು ಮಾರ್ಗ ಹಾಗೂ ಮೈಸೂರು - ಉದಯಪುರ (ರಾಜಸ್ಥಾನ) ನಡುವೆ ಸಂಚರಿಸುವ ಪ್ಯಾಲೇಸ್ ಕ್ವೀನ್ ಹಮ್ ಸಫರ್ ಎಕ್ಸ್ ಪ್ರೆಸ್ ರೈಲು ಸಂಚಾರ ಸೇವೆಯನ್ನು ಸೋಮವಾರ ದೇಶಕ್ಕೆ ಅರ್ಪಿಸಿದ್ದಾರೆ. ಈ ಸಂದರ್ಭ ರಾಜ್ಯಪಾಲ ವಜೂಭಾಯಿ ವಾಲಾ, ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ಅನಂತಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಂಸದರಾದ ಪ್ರತಾಪ ಸಿಂಹ, ಸಿ.ಎಸ್.ಪುಟ್ಟರಾಜು, ಸರಕಾರದ ಮುಖ್ಯ ಕಾರ್ಯದರ್ಶಿ ರತ್ನಪಭಾ, ಮೈಸೂರು ಮೇಯರ್ ಭಾಗ್ಯವತಿ, ಡಿಸಿ ರಂದೀಪ್ ಮತ್ತಿತರರು ಉಪಸ್ಥಿತರಿದ್ದರು.