ಅಖಿಲ ಭಾರತ ಅಂತರ್ ವಿವಿ ಮಹಿಳೆಯರ ನೆಟ್‌ಬಾಲ್ ಚಾಂಪಿಯನ್‌ಶಿಪ್‌ಗೆ ಚಾಲನೆ

Update: 2018-02-20 10:56 GMT

ಉಡುಪಿ, ಫೆ.20: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಉಡುಪಿ ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಜಂಟಿ ಆಶ್ರಯದಲ್ಲಿ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾದ ನಾಲ್ಕು ದಿನಗಳ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ವುಟ್ಟದ ಮಹಿಳೆಯರ ನೆಟ್ ಬಾಲ್ ಚಾಂಪಿಯನ್‌ಶಿಪ್‌ಗೆ ಇಂದು ಚಾಲನೆ ನೀಡಲಾಯಿತು.

ಪಂದ್ಯಾವಳಿಗೆ ಚಾಲನೆ ನೀಡಿದ ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಈ ಪಂದ್ಯಾವಳಿಗೆ ಇಲಾಖೆಯಿಂದ ಎರಡು ಲಕ್ಷ ರೂ. ಅನುದಾನವನ್ನು ನೀಡಲಾಗಿದೆ. ವಿದ್ಯಾರ್ಥಿಗಳು ಕೇವಲ ಪಾಠಕೆ್ಕ ಸೀಮಿತವಾಗಿರದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳಬೇಕು. ಕ್ರೀಡೆಯಿಂದ ಭವಿಷ್ಯದಲ್ಲಿ ಬರುವ ಕಷ್ಟಗಳನ್ನು ಎದುರಿಸುವ ಆತ್ಮವಿಶ್ವಾಸ ಹೆಚ್ಚಾಗು್ತದೆ. ದೈಹಿಕ ಮಾತ್ರವಲ್ಲದೆ ಮಾನಸಿಕ ಆರೋಗ್ಯ ಕೂಡ ಉತ್ತಮವಾಗಿರಲು ಸಾಧ್ಯ ಎಂದರು.

ಪಂದ್ಯಾವಳಿಯನ್ನು ಉದ್ಘಾಟಿಸಿದ ಅದಮಾರು ಮಠಾಧೀಶ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

ಅಧ್ಯಕ್ಷತೆಯನ್ನು ಮಂಗಳೂರು ವಿವಿಯ ಉಪ ಕುಲಪತಿ ಪ್ರೊ.ಕೆ.ಭೈರಪ್ಪ ವಹಿಸಿದ್ದರು. ಅಂತಾರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಪದ್ಮಶ್ರೀ ಮಾಲತಿ ಹೊಳ್ಳ, ಅಖಿಲ ಭಾರತ ವಿಶ್ವವಿದ್ಯಾನಿಲಯಗಳ ವೀಕ್ಷಕ ಡಾ.ರಾಜೇಶ್, ಕಾಲೇಜಿನ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ.ಜಿ.ಎಸ್.ಚಂದ್ರಶೇಖರ್, ಗೌರವ ಕೋಶಾಧಿಕಾರಿ ಪ್ರದೀಪ್ ಕುಮಾರ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುಕುಮಾರ್ ಮುಖ್ಯ ಅತಿಥಿಗಳಾಗಿದ್ದರು.

ಮಂಗಳೂರು ವಿವಿಯ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಕಿಶೋರ್ ಕುಮಾರ್ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಗದೀಶ್ ಶೆಟ್ಟಿ ವಂದಿಸಿದರು.

ಈ ಪಂದ್ಯಾವಳಿಯಲ್ಲಿ ಕರ್ನಾಟಕ, ಕೇರಳ, ಲಕ್ನೋ, ಜೈಪುರ, ತೆಲಂಗಾಣ, ಒಡಿಶಾ, ಚಂಡೀಗಡ, ಅಹ್ಮದಾಬಾದ್, ಹರ್ಯಾಣ, ಮಹಾರಾಷ್ಟ್ರ, ಹೈದರಾಬಾದ್, ಪಾಟ್ನಾ ಸೇರಿದಂತೆ ವಿವಿಧ ರಾಜ್ಯಗಳ ಒಟ್ಟು 35 ತಂಡಗಳು ಭಾಗವಹಿಸಿದ್ದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News