ಮಡಿಕೇರಿ: ಜಿಲ್ಲಾ ಕಾಂಗ್ರೆಸ್ ಎಸ್‍ಸಿ ವಿಭಾಗದ ಸಭೆ

Update: 2018-02-20 12:26 GMT

ಮಡಿಕೇರಿ, ಫೆ.20 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಸಮಿತಿ, ಐದು ಬ್ಲಾಕ್ ಸಮಿತಿ ಮತ್ತು ಜಿಲ್ಲಾ ವಲಯ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ನಗರದಲ್ಲಿ ನಡೆಯಿತು.

ನಗರದ ಹೊಟೇಲ್ ವ್ಯಾಲ್ಯುವ್ಯು ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರಾದ ವಿ.ಕೆ.ಸತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಬ್ಲಾಕ್ ಮತ್ತು ವಲಯ ಸಮಿತಿಗಳನ್ನು ಪುನರ್ ರಚಿಸಿ ಸಮಿತಿಯ ಪದಾಧಿಕಾರಿಗಳಿಗೆ ಆದೇಶ ಪತ್ರವನ್ನು ನೀಡಲಾಯಿತು. 

ರಾಜ್ಯ ಸಮಿತಿಯ ಸಂಚಾಲಕರು ಹಾಗೂ ಜಿಲ್ಲಾ ಉಸ್ತುವಾರಿ ಎಸ್.ಎನ್. ರವಿಕುಮಾರ್ ಮಾತನಾಡಿ ಶ್ರೀಘ್ರ ಎಲ್ಲಾ ಕಾರ್ಯಕಾರಿ ಸಮಿತಿಯನ್ನು ರಚಿಸುವ ಮೂಲಕ ಪಕ್ಷಕ್ಕೆ ಮತ್ತಷ್ಟು ಬಲ ತುಂಬಲಾಗುವುದು ಎಂದರು. ಚುನಾವಣೆ ಸಮೀಪಿಸುತ್ತಿರುವುದರಿಂದ ಪ್ರತಿಯೊಬ್ಬರು ಜಿಲ್ಲೆಯ ಎರಡೂ ಕ್ಷೇತ್ರಗಳ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು. 

ಕೆಪಿಸಿಸಿಗೆ ಎಸ್‍ಸಿ ವಿಭಾಗದ ಸದಸ್ಯರನ್ನು ನೇಮಕ ಮಾಡಿಕೊಳ್ಳದೆ ನಿಗಮಗಳಲ್ಲಿ ಯಾವುದೇ ಹುದ್ದೆಗಳು ದೊರಕಲು ಸಾಧ್ಯವಾಗುತ್ತಿಲ್ಲ ಎನ್ನುವ ವಿಚಾರದ ಕುರಿತು ಸಭೆಯಲ್ಲಿ ಚರ್ಚೆ ನಡೆದು ಸೂಕ್ತ ಸಲಹೆ, ಸೂಚನೆಗಳನ್ನು ಪಡೆಯಲಾಯಿತು.

ಜಿಲ್ಲಾಧ್ಯಕ್ಷರಾದ ವಿ.ಕೆ.ಸತೀಶ್ ಕುಮಾರ್ ಮಾತನಾಡಿ, ಎಸ್‍ಸಿ ಘಟಕದ ಬಲವರ್ಧನೆಯೊಂದಿಗೆ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‍ನ ಗೆಲುವಿಗೆ ನಾಯಕರಾದಿಯಾಗಿ ಎಲ್ಲಾ ಕಾರ್ಯಕರ್ತರು ಪಣ ತೊಡಬೇಕೆಂದರು.

ಉಪಾಧ್ಯಕ್ಷರುಗಳಾದ ರಾಜಮ್ಮ ರುದ್ರಯ್ಯ, ಪಿ.ಸಿ.ಬೇಲಯ್ಯ, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಎಸ್‍ಸಿ ವಿಭಾಗದ ಅಧ್ಯಕ್ಷರಾದ ಹೆಚ್.ಈ.ಸುರೇಶ್, ಉಪಾಧ್ಯಕ್ಷರಾದ ಜರ್ನಾಧನ್, ಪೋನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುರುಗನ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪೊನ್ನಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಉಮೇಶ್ ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೌತಮ್ ಶಿವಪ್ಪ, ಜಿಲ್ಲಾ ಸಮಿತಿ ಸದಸ್ಯರಾದ ಎಂ.ಆರ್.ಮಲ್ಲೇಶ್, ಎಸ್.ಕೆ. ಪುಟ್ಟಸ್ವಾಮಿ, ಸಣ್ಣ ಪುಟ್ಟಯ್ಯ, ಧರ್ಮಣ್ಣ, ಯುವ ಕಾಂಗ್ರೆಸ್ ಕಾರ್ಯದರ್ಶಿ ಹೂವಯ್ಯ, ಜಿಲ್ಲಾ ಪಂಚಾಯತ್ ಸದಸ್ಯರಾದ ಲೀಲಾವತಿ, ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹಾಗೂ  ಬ್ಲಾಕ್ ಸಮಿತಿ, ವಲಯ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯದರ್ಶಿ ಗಾಯತ್ರಿ ನರಸಿಂಹ ಸ್ವಾಗತಿಸಿ, ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News