ಆರ್‌ಟಿಇ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ: ಮಾ.21 ಅರ್ಜಿ ಸಲ್ಲಿಕೆಗೆ ಕೊನೆ ದಿನ

Update: 2018-02-20 16:40 GMT

ಬೆಂಗಳೂರು, ಫೆ. 20: ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಆನ್‌ಲೈನ್ ಮೂಲಕ ಇಂದಿನಿಂದ(ಫೆ.20) ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ.

ಶಿಕ್ಷಣ ಹಕ್ಕು ಕಾಯ್ದೆ ಅಡಿಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯಾದ್ಯಂತ 1.40 ಲಕ್ಷ ಸೀಟುಗಳು ಲಭ್ಯವಿದ್ದು, ಫೆ.20 ರಿಂದ ಮಾ.21 ರವರೆಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸ್ವೀಕಾರ ಹಾಗೂ ಸೀಟು ಹಂಚಿಕೆ ಆನ್‌ಲೈನ್‌ನಲ್ಲಿಯೇ ನಡೆಯುವುದರಿಂದ ಸಾಫ್ಟ್‌ವೇರ್ ಉನ್ನತೀಕರಿಸಲಾಗಿದೆ. ಜೊತೆಗೆ, ಅನುದಾನಿತ ಶಾಲೆಗಳನ್ನು ಈ ಕಾಯ್ದೆ ಅಡಿಯಲ್ಲಿ ತರಲಾಗಿದ್ದು, ಆರ್‌ಟಿಇ ಸೀಟುಗಳ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡ ನಂತರ ಅರ್ಜಿ ಪರಿಶೀಲನೆ ನಡೆಸಿ ವೊದಲ ಸುತಿ್ತನ ಸೀಟು ಹಂಚಿಕೆ ಮಾಡಲಾಗುತ್ತದೆ

ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ) ಅಡಿಯಲ್ಲಿ ಅರ್ಜಿ ಸಲ್ಲಿಸಲು ಮಗು ಹಾಗೂ ಪೋಷಕರ ಆಧಾರ್ ಸಂಖ್ಯೆ ಕಡ್ಡಾಯವಾಗಿ ನಮೂದಿಸಲಾಗಿದೆ. ಆಧಾರ್ ಸಂಖ್ಯೆಯಿಲ್ಲದೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ಆರ್‌ಟಿಇ ಅಡಿ ಸೀಟು ಲಭ್ಯವಿರುವ ಎಲ್ಲ ಶಾಲೆಗಳ ಮಾಹಿತಿಯನ್ನು ಈಗಾಗಲೇ ಇಲಾಖೆಯ ವೆಬ್‌ಸೈಟ್‌ನಲ್ಲಿ ಅಳವಡಿಸಲಾಗಿದೆ. ಅಗತ್ಯ ಪಿನ್‌ಕೋಡ್ ಬಳಸಿ ತಮ್ಮ ವ್ಯಾಪ್ತಿಯಲ್ಲಿರುವ ಖಾಸಗಿ ಶಾಲೆಗಳ ಮಾಹಿತಿಯನ್ನು ಪಡೆಯಬಹುದಾಗಿದೆ.

ಆನ್‌ಲೈನ್ ಅರ್ಜಿ ಸಲ್ಲಿಸಲು ಸಿದ್ಧಪಡಿಸಿರುವ ಸಾಫ್ಟ್‌ವೇರ್ ಸರಕಾರದಿಂದ ಈಗಾಗಲೇ ಒಪ್ಪಿಗೆ ಸೂಚಿಸಲಾಗಿದೆ. ಅದರಂತೆ ಇಲಾಖೆಯ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿದ್ದು, ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಒಂದು ವೇಳೆ ತಾಂತ್ರಿಕ ಸಮಸ್ಯೆಯಾದರೆ ಒಂದೆರಡು ದಿನಗಳು ವಿಳಂಬವಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಲೂಕುಗಳಲ್ಲಿ ಎಲ್‌ಕೆಜಿ ಹಾಗೂ 1 ನೆ ತರಗತಿಯಿಂದ ಎಲ್ಲಿ ಸೀಟುಗಳು ಲಭ್ಯವಿದೆ ಎಂಬ ಮಾಹಿತಿ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದ್ದು, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು ಹಾಗೂ ಮಾಹಿತಿಯನ್ನು ಇಲಾಖೆಯ ವೆಬ್‌ಸೈಟ್ www.schooleducation.com ನಲ್ಲಿ ಪಡೆಯಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News