ಬೆಂಗಳೂರು: ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನ

Update: 2018-02-20 18:12 GMT

ಬೆಂಗಳೂರು, ಫೆ. 20: ಯಕ್ಷಗಾನ ಅಕಾಡಮಿಯು 2017-18ನೆ ಸಾಲಿನಲ್ಲಿ ವಿಶೇಷ ಘಟಕ ಯೋಜನೆಯಡಿ ಅಕಾಡೆಮಿ ವ್ಯಾಪ್ತಿಗೆ ಒಳಪಡುವ ಯಕ್ಷಗಾನ ಕ್ಷೇತ್ರದಲ್ಲಿ 5 ತಿಂಗಳ ಕಾಲ ಸಂಶೋಧನಾ ಅಧ್ಯಯನ ಮಾಡಿ ಪ್ರಬಂಧ ಮಂಡಿಸುವವರಿಗೆ ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಿದೆ.

ಈ ಸಂಶೋಧನಾ ಕಾರ್ಯಕ್ಕಾಗಿ ಒಬ್ಬ ಸಂಶೋಧನಾ ಅಭ್ಯರ್ಥಿಗೆ 90 ಸಾವಿರ ರೂ. ಹಾಗೂ ಮಾರ್ಗದರ್ಶಕರ ಗೌರವ ಸಂಭಾವನೆ 10 ಸಾವಿರ ರೂ.ಗಳನ್ನು ನಿಗದಿಪಡಿಸಿದೆ. ಅರ್ಜಿ ಸಲ್ಲಿಸುವವರು ಪರಿಶಿಷ್ಟ ಜಾತಿ ಮಾತ್ರ ಸೇರಿದವರಾಗಿರಬೇಕು. ವಯೋಮಿತಿ 45 ವರ್ಷ ಮೀರಿರಬಾರದರು.

ಯಕ್ಷಗಾನದ ತೆಂಕುತಿಟ್ಟು, ಬಡಗುತಿಟ್ಟು, ಬಡಾಬಡಗುತಿಟ್ಟು, ತಾಳಮದ್ದಳೆ, ಮೂಡಲಪಾಯ, ಯಕ್ಷಗಾನ ಬೊಂಬೆಯಾಟ, ಯಕ್ಷಗಾನದ ಇತರೆ ಪ್ರಕಾರಗಳು. ಆಸಕ್ತಿ ಇರುವ ಕನ್ನಡ ಭಾಷಾ ಜ್ಞಾನ, ಜಾನಪದ, ಸಮಾಜ ಜ್ಞಾನ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಮಹಿಳಾ ಅಧ್ಯಯನ, ಇತಿಹಾಸ, ಮಾನವಶಾಸ್ತ್ರ, ಪತ್ರಿಕೋದ್ಯಮ, ಗ್ರಂಥಾಲಯ, ಮಾಹಿತಿ ತಂತ್ರಜ್ಞಾನ, ಇಂಗ್ಲಿಷ್ ಇತ್ಯಾದಿ ಮಾನವಿಕ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿರುವವರು ಅರ್ಜಿ ಸಲ್ಲಿಸಬಹುದು.

ಆಸಕ್ತ ಇರುವವರು ಆಯ್ಕೆ ಮಾಡಿಕೊಳ್ಳುವ ಅಧ್ಯಯನದ ವಿಷಯದ ಬಗ್ಗೆ ನಾಲ್ಕು ಪುಟಗಳ ಸಾರಲೇಖ (ಸಾರಾಂಶ) ಹಾಗೂ ಸಾಧನೆಯ ಕಿರುಪರಿಚಯ ಹಾಗೂ ಜಾತಿ ಪ್ರಮಾಣ ಪತ್ರದೊಂದಿಗೆ ಅರ್ಜಿಯನ್ನು ಮಾ.9ರೊಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, 2ನೆ ಮಹಡಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-2 ಇವರಿಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿಗಳನ್ನು ಅಂಚೆ ಮೂಲಕ ಅಥವಾ ಇ-ಮೇಲ್ ಮೂಲಕ (kyubabangalore@gmail.com) ಕಳುಹಿಸಿಕೊಡಲು ಕೋರಿದೆ. ಫೆಲೋಶಿಪ್ ಅರ್ಜಿ ನಮೂನೆಯನ್ನು ಜಿಲ್ಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News