ಕೆರೆ ಅಭಿವೃದ್ಧಿ ಪ್ರಾಧಿಕಾರದಡಿಯಲ್ಲಿ ರಾಜ್ಯದ 3700 ಕೆರೆಗಳು: ಟಿ.ಬಿ.ಜಯಚಂದ್ರ

Update: 2018-02-21 13:31 GMT

ಬೆಂಗಳೂರು, ಫೆ.21: ಬೆಂಗಳೂರು ನಗರದಲ್ಲಿರುವ ಕೆರೆಗಳನ್ನು ಕೆರೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ವಿಲೀನಗೊಳಿಸುವ ಸಂಬಂಧ ಪ್ರಸಕ್ತ ಅಧಿವೇಶನದಲ್ಲಿ ಮಸೂದೆಯೊಂದನ್ನು ಮಂಡಿಸಲಾಗುವುದು ಎಂದು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ.

ಬುಧವಾರ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ರಘುನಾಥ್‌ರಾವ್ ಮಲ್ಕಾಪೂರೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಒಟ್ಟು 3700 ಕೆರೆಗಳಿದ್ದು, ಅವುಗಳೆಲ್ಲವನ್ನು ಕೆರೆ ಅಭಿವೃದ್ಧಿ ಪ್ರಾಧಿಕಾರದಡಿ ತರಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿರುವ ಬಹುತೇಕ ಕೆರೆಗಳು ಒತ್ತುವರಿಯಾಗಿದ್ದು, ಅವುಗಳನ್ನು ಕೆರೆ ಅಭಿವೃದ್ಧಿ ಪ್ರಾಧಿಕಾರದಡಿ ಸೇರಿಸಲಾಗುವುದು. ಕೆರೆಗಳಲ್ಲಿರುವ ಹೂಳು ಎತ್ತುವುದು ಸೇರಿದಂತೆ ಹಲವು ಅಭಿವೃದ್ಧಿ ಕ್ರಮಗಳನ್ನು ಕೈಗೆತ್ತಿಕೊಳ್ಳಲು 60 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 5 ಕೆರೆಗಳಲ್ಲಿ ನೀರು ತುಂಬಿದೆ. 31 ಕೆರೆಗಳಲ್ಲಿ ಶೇ. 50 ರಷ್ಟು ಮಾತ್ರವೇ ನೀರಿದ್ದು, 88 ಕೆರೆಗಳಲ್ಲಿ ಶೇ.50ಕ್ಕಿಂತ ಕಡಿಮೆ ನೀರಿದೆ ಎಂದು ಸಚಿವರು ವಿವರ ನೀಡಿದರು.

ಶೇ.50ಕ್ಕಿಂತ ಕಡಿಮೆ ನೀರು ಇದ್ದ ಪಕ್ಷದಲ್ಲಿ ವ್ಯವಸಾಯ ಮತ್ತಿತರ ಉದ್ದೇಶಕ್ಕಾಗಿ ನೀರು ಬಿಡಬೇಕಾದರೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News