×
Ad

ಅರಣ್ಯ ಇಲಾಖೆಯ ಖಾಲಿ ಹುದ್ದೆಗಳನ್ನು 5 ವರ್ಷಗಳಲ್ಲಿ ಭರ್ತಿ ಮಾಡಲಾಗುವುದು: ಟಿ.ಬಿ.ಜಯಚಂದ್ರ

Update: 2018-02-21 20:45 IST

ಬೆಂಗಳೂರು, ಫೆ.21: ರಾಜ್ಯ ಅರಣ್ಯ ಇಲಾಖೆಯಲ್ಲಿ ಮುಂದಿನ ಐದು ವರ್ಷಗಳಲ್ಲಿ 3085 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ.

ಬುಧವಾರ ವಿಧಾನ ಪರಿಷತ್‌ನಲ್ಲಿ ಜೆಡಿಎಸ್ ಸದಸ್ಯ ಕೆ.ಪಿ.ಶ್ರೀಕಂಠೇಗೌಡ ಕೇಳಿದ ಪ್ರಶ್ನೆಗೆ ಅರಣ್ಯ ಸಚಿವ ರಮಾನಾಥರೈ ಅವರ ಪರವಾಗಿ ಉತ್ತರಿಸಿದ ಸಚಿವರು, ಬಂಡೀಪುರ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಖಾಲಿ ಇರುವ ಹುದ್ದೆಗಳನ್ನು ಈ ಐದು ವರ್ಷಗಳಲ್ಲಿ ಆದ್ಯತೆ ಆಧಾರದ ಮೇಲೆ ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.

16 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, 67 ವಲಯ ಅರಣ್ಯಾಧಿಕಾರಿ, 751 ಉಪ ವಲಯ ಅರಣ್ಯಾಧಿಕಾರಿ, 1500 ಅರಣ್ಯ ರಕ್ಷಕ, 751 ಅರಣ್ಯ ವೀಕ್ಷಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.

ಅರಣ್ಯ ಇಲಾಖೆಯಲ್ಲಿ ಈಗಾಗಲೇ ಖಾಲಿ ಇರುವ ಹುದ್ದೆಗಳ ಪೈಕಿ 143 ಉಪವಲಯ ಅರಣ್ಯಾಧಿಕಾರಿ, 119 ಅರಣ್ಯ ರಕ್ಷಕ ಹುದ್ದೆ ಸೇರಿ ಒಟ್ಟು 262 ಹುದ್ದೆಗಳನ್ನು ಈ ವರ್ಷವೇ ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News