×
Ad

ಕೊಡಗು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ಎಂ.ಎಸ್.ನಂದಕುಮಾರ್ ರಾಜೀನಾಮೆ

Update: 2018-02-22 18:15 IST

ಮಡಿಕೇರಿ,ಫೆ.22 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸ್ಥಾನಕ್ಕೆ ಎಂ.ಎಸ್.ನಂದಕುಮಾರ್ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಇತ್ತೀಚಿಗೆ ಸೋಮವಾರಪೇಟೆಯಲ್ಲಿ ನಡೆದ ಪಕ್ಷದ ಸಭೆಯ ನಂತರ ಡಿ.ಸಿ.ಸಿ ಉಪಾಧ್ಯಕ್ಷರಾದ ಎಂ.ಎಸ್. ನಂದಕುಮಾರ್ ಅವರು ಅಲ್ಪಸಂಖ್ಯಾತ ವರ್ಗಕ್ಕೆ ನೋವಾಗುವ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಪ್ರಕರಣದ ಕುರಿತು ಬಂದ ದೂರಿನ ಹಿನ್ನೆಲೆಯಲ್ಲಿ ಡಿಸಿಸಿ ಸಮಜಾಯಿಷಿಕೆ ಕೇಳಿ ನೋಟೀಸ್ ನೀಡಿತ್ತು ಎಂದು ಹೇಳಿದ್ದಾರೆ.

ತಮ್ಮ ಆಚಾತುರ್ಯದ ಬಗ್ಗೆ ಬಹಿರಂಗ ಕ್ಷಮೆ ಕೋರಿದ್ದ ಎಂ.ಎಸ್.ನಂದಕುಮಾರ್, ಇದೀಗ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಜಿಲ್ಲಾಧ್ಯಕ್ಷರಿಗೆ ಸಲ್ಲಿಸಿದ್ದಾರೆ ಎಂದು ವಿ.ಪಿ.ಸುರೇಶ್ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News