×
Ad

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

Update: 2018-02-22 18:45 IST

ಬೆಂಗಳೂರು, ಫೆ.22: ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ಮಾ.1ರಿಂದ 17ರವರೆಗೆ ಪರೀಕ್ಷೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಬಿಎಂಟಿಸಿ, ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ.

ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ವಿದ್ಯಾರ್ಥಿಗಳು ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ ನಿರಾತಂಕವಾಗಿ ಸಂಚರಿಸಿ, ಪರೀಕ್ಷೆಯನ್ನು ಚೆನ್ನಾಗಿ ಬರೆಯಬೇಕೆಂದು ಸಾರಿಗೆ ಇಲಾಖೆ ಪ್ರಕಟನೆಯಲ್ಲಿ ಆಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News