ಕೆಂಜೂರು: ಬೈಕ್ ಸಾಹಸ ಪ್ರದರ್ಶನ
ಮಂಗಳೂರು, ಫೆ. 22: ರೇಸಿಂಗ್ ಬೈಕುಗಳ ಬ್ರಾಂಡ್‌ಗಳಲ್ಲಿ ಮುಂಚೂಣಿಯಲ್ಲಿರುವ ಕೆಟಿಎಂ ಸಂಸ್ಥೆಯು ಕೆಂಜೂರಿನಲ್ಲಿರುವ ಶ್ರೀದೇವಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಗುರುವಾರ ಬೈಕ್ ಸಾಹಸ ಪ್ರದರ್ಶನವನ್ನು ಆಯೋಜಿಸಿತ್ತು.
ಚೆನ್ನೈಯಿಂದ ಆಗಮಿಸಿದ್ದ ವೃತ್ತಿಪರ ಸಾಹಸಿ ಬೈಕ್ ಚಾಲಕರು ಮೈನವಿರೇಳಿಸುವಂತೆ ಬೈಕ್ ಸಾಹಸ ಮತ್ತು ಟ್ರಿಕ್‌ಗಳನ್ನು ಪ್ರದರ್ಶಿಸಿದರು. ಈ ಸಾಹಸ ಪ್ರದರ್ಶನಕ್ಕೆ ನೂರಾರು ಜನರು ಸಾಕ್ಷಿಯಾದರು. ಪ್ರೇಕ್ಷಕರು ಉಸಿರು ಬಿಗಿಹಿಡಿಯುವಂತೆ ಕೆಟಿಎಂ ಡ್ಯೂಕ್ ಬೈಕ್‌ಗಳಲ್ಲಿ ಚಾಲಕರು ಸಾಹಸಗಳನ್ನು ಸಾದರಪಡಿಸಿದರು.
ಈ ಸಂದರ್ಭ ಮಾತನಾಡಿದ ಬಜಾಜ್ ಆಟೋ ಲಿ.ನ ಪ್ರೊ ಬೈಕಿಂಗ್ ವಿಭಾಗದ ಅಧ್ಯಕ್ಷ ಅಮಿತ್ ನಂದಿ ಕೆಟಿಎಂ ಬ್ರಾಂಡ್ ಅಧಿಕ ಸಾಮರ್ಥ್ಯದ ರೇಸಿಂಗ್ ಬೈಕ್‌ಗಳಿಗೆ ಹೆಸರಾಗಿದೆ. ಕೆಟಿಎಂ ಬೈಕ್‌ಗಳು ಚಾಲಕರಿಗೆ ಯಾವ ರೀತಿಯ ರೋಮಾಂಚಕ ಅನುಭವ ನೀಡಬಹುದು ಎನ್ನುವುದನ್ನು ಇಂಥ ಪ್ರದರ್ಶನದ ಮೂಲಕ ಸಾಬೀತುಪಡಿಸಲಾಗುತ್ತಿದೆ. ದೇಶದ ಪ್ರಮುಖ ನಗರಗಳಲ್ಲಿ ವೃತ್ತಿಪರ ಸಾಹಸಿ ಸವಾರರು ಈ ಪ್ರದರ್ಶನ ನೀಡಲಾಗುತ್ತಿದೆ ಎಂದರು.