×
Ad

​ಫೆ.24: ಬಡವರಿಗೆ ಪ್ಲಾಟ್‌ಗೆ ಶಿಲಾನ್ಯಾಸ

Update: 2018-02-22 20:00 IST

ಮಂಗಳೂರು, ಫೆ.22: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ನಗರ ಆಶ್ರಯ ಸಮಿತಿಯ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರ ಹಾಗೂ ಮಂಗಳೂರು ಮಹಾನಗರಪಾಲಿಕೆಯ ಸಹಯೋಗದಲ್ಲಿ ರಾಜೀವನಗರದಲ್ಲಿ ನಿರ್ಮಿಸಲಾಗುವ ಜಿ+3 ಮಾದರಿಯ ವಸತಿ ಸಂಕೀರ್ಣದ ಶಿಲಾನ್ಯಾಸ ಕಾರ್ಯಕ್ರಮವು ಫೆ. 24ರಂದು ಬೆಳಗ್ಗೆ 10ಕ್ಕೆ ಕುಲಶೇಖರದ ಕೋರ್ಡೆಲ್ ಹಾಲ್ನಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಜೆ.ಆರ್. ಲೋಬೊ ವಹಿಸಲಿದ್ದಾರೆ. ವಸತಿ ಸಚಿವ ಎಂ. ಕೃಷ್ಣಪ್ಪ ಶಿಲಾನ್ಯಾಸ ಮಾಡಲಿದ್ದಾರೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉಪಸ್ಥಿತರಿರುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News