ಫೆ.26: ದ.ಕ. ಜಿಲ್ಲಾಮಟ್ಟದ ಕೈಗಾರಿಕಾ ಸ್ಪಂದನ
Update: 2018-02-22 20:01 IST
ಮಂಗಳೂರು, ಫೆ.22: ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ ಫೆ,26ರಂದು ಪೂ.11:30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುವುದು.
ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳು/ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಡಿ, ಮಂಗಳೂರು ಇವರಿಗೆ ಫೆ.24 ರೊಳಗಾಗಿ ಲಿಖಿತವಾಗಿ ಸಲ್ಲಿಸಬೇಕು. ಮಾಹಿತಿಗೆ ದೂ.ಸಂ: 2214021ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.