×
Ad

ಕ್ರಿಕೆಟ್ ಬೆಟ್ಟಿಂಗ್: ಓರ್ವನ ಬಂಧನ

Update: 2018-02-22 23:49 IST

ಬೆಂಗಳೂರು, ಫೆ.22: ಹಣ ಪಣವಾಗಿ ಕಟ್ಟಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿ 1.88 ಲಕ್ಷ ರೂ.ವಶಕ್ಕೆ ಪಡೆಯುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.ಕಮಲಾನಗರದ ರಘು(30) ಬಂಧಿತ ಆರೋಪಿ ಎಂದು ಸಿಸಿಬಿ ತಿಳಿಸಿದೆ.

ಕಮಲಾನಗರದ ಎನ್‌ಜಿಒಎಸ್ ಕಾಲನಿ, 3ನೆ ಕ್ರಾಸ್‌ನಲ್ಲಿ ಟಿ-20 ಮಾದರಿಯ ಕ್ರಿಕೆಟ್ ಪಂದ್ಯಕ್ಕೆ ಈಗ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಕ್ರಿಕೆಟ್ ಬೆಟ್ಟಿಂಗ್ ಎಂಬ ಅದೃಷ್ಟದ ಜೂಜಾಟ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿ ವಿರುದ್ಧ ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News