ನಾಲ್ಕನೇ ಬಾರಿ ಶೂನ್ಯ ಸಂಪಾದಿಸಿದ ರೋಹಿತ್

Update: 2018-02-22 18:28 GMT

ಸೆಂಚೂರಿಯನ್, ಫೆ.22: ಸೀಮಿತ ಓವರ್ ಕ್ರಿಕೆಟ್‌ನಲ್ಲಿ ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮ ಓರ್ವ ನಿರ್ಭೀತ ಬ್ಯಾಟ್ಸ್‌ಮನ್. ಆದರೆ, ಗುರುವಾರ ಟ್ವೆಂಟಿ-20 ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಮ್ಮೆ ಅನಪೇಕ್ಷಿತ ದಾಖಲೆ ನಿರ್ಮಿಸಿದರು. ಗುರುವಾರ ನಡೆದ ದಕ್ಷಿಣ ಆಫ್ರಿಕ ವಿರುದ್ಧದ ಎರಡನೇ ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕದ ವೇಗದ ಬೌಲರ್ ಜೂನಿಯರ್ ಡಾಲಾರ ಬೌಲಿಂಗ್‌ನಲ್ಲಿ ಖಾತೆ ತೆರೆಯದೇ ಶೂನ್ಯಕ್ಕೆ ಔಟಾದರು. ರೋಹಿತ್ ನಾಲ್ಕನೇ ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಭಾರತದ ಮೊದಲ ಕ್ರಿಕೆಟಿಗ ಎನಿಸಿಕೊಂಡರು. ರೋಹಿತ್ ಸರಣಿಯಲ್ಲಿ ಎರಡನೇ ಬಾರಿ ಡಾಲಾಗೆ ವಿಕೆಟ್ ಒಪ್ಪಿಸಿದರು.

ಈ ಹಿಂದೆ ಭಾರತದ ಮಾಜಿ ವೇಗಿ ಆಶೀಷ್ ನೆಹ್ರಾ ಹಾಗೂ ಹಿರಿಯ ಆಲ್‌ರೌಂಡರ್ ಯೂಸುಫ್ ಪಠಾಣ್ ತಲಾ 3 ಬಾರಿ ಶೂನ್ಯಕ್ಕೆ ಔಟಾಗಿದ್ದರು.

ಈಗ ನಡೆಯುತ್ತಿರುವ ದಕ್ಷಿಣ ಆಫ್ರಿಕ ಪ್ರವಾಸ ರೋಹಿತ್ ಪಾಲಿಗೆ ಸ್ಮರಣೀಯವಾಗಿಲ್ಲ. ಪೋರ್ಟ್ ಎಲಿಝಬೆತ್‌ನಲ್ಲಿ ನಡೆದ ಐದನೇ ಏಕದಿನ ಪಂದ್ಯದಲ್ಲಿ ರೋಹಿತ್ ಶತಕ ಸಿಡಿಸಿದ್ದರು. ಆದರೆ, ಶತಕ ಸಿಡಿಸುವ ಮೊದಲು ಅವರು ಸರಣಿಯಲ್ಲಿ ಕೇವಲ 55 ರನ್ ಗಳಿಸಿದ್ದರು. ಟೆಸ್ಟ್ ಸರಣಿಯಲ್ಲಿ 4 ಇನಿಂಗ್ಸ್‌ಗಳಲ್ಲಿ ಕೇವಲ 78 ರನ್ ಗಳಿಸಿ ಟೀಕೆಗೆ ಗುರಿಯಾಗಿದ್ದರು. 5ನೇ ಏಕದಿನದಲ್ಲಿ ಶತಕ ಸಿಡಿಸಿ ಟೀಕಾಕಾರರ ಬಾಯಿ ಮುಚ್ಚಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News