ಶಾಲೆಯ ಹೊರಭಾಗದಲ್ಲಿ ವಿದ್ಯಾರ್ಥಿನಿಯ ತಲೆಕಡಿದ ದುಷ್ಕರ್ಮಿ

Update: 2018-02-23 07:07 GMT

ಮಧ್ಯಪ್ರದೇಶ, ಫೆ.23: ಶಾಲೆಯ ಹೊರಭಾಗದಲ್ಲಿ ವಿದ್ಯಾರ್ಥಿನಿಯ ತಲೆ ಕತ್ತರಿಸಿದ ವ್ಯಕ್ತಿಯೊಬ್ಬನನ್ನು ಮಧ್ಯಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

ಇಲ್ಲಿನ ಕೋಟ್ಮಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು ದಿಲೀಪ್ ಸಾಹು ಎಂದು  ಗುರುತಿಸಲಾಗಿದ್ದು, ಮಾರಕಾಯುಧಗಳಿಂದ ವಿದ್ಯಾರ್ಥಿನಿಯ ಮೇಲೆ ದಾಳಿ ನಡೆಸಿದ್ದ ಎನ್ನಲಾಗಿದೆ.

“ನಾನು ಶಾಲೆಯ ಹೊರಭಾಗದಲ್ಲಿ ವಿದ್ಯಾರ್ಥಿನಿಯನ್ನು ವ್ಯಕ್ತಿಯೊಬ್ಬ ಹಿಂಬಾಲಿಸುತ್ತಿರುವುದನ್ನು ನೋಡಿದೆ. ಆಕೆಯ ಕುಟುಂಬದ ಸದಸ್ಯನಿರಬಹುದು ಎಂದು ನಾನು ಭಾವಿಸಿದೆ. ಏಕಾಏಕಿ ಆತ ವಿದ್ಯಾರ್ಥಿನಿಯ ಮೇಲೆ ದಾಳಿ ನಡೆಸಿದೆ. ನಾನು ಕೂಡಲೇ ಸ್ಥಳಕ್ಕೆ ಧಾವಿಸಿದೆ. ಆದರೆ ಆತ ಸ್ಥಳದಿಂದ ಕಾಲ್ಕಿತ್ತ” ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ವರ್ಷಗಳಿಂದ ಈತ ವಿದ್ಯಾರ್ಥಿನಿಯನ್ನು ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. “2014ರಲ್ಲಿ ದಿಲೀಪ್ ವಿರುದ್ಧ ಬಾಲಕಿ ದೂರು ನೀಡಿದ್ದಳು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News