ಉಡುಪಿ: ಪೊಲೀಸರಿಂದ 3.788 ಕೆ.ಜಿ. ಗಾಂಜಾ ನಾಶ
Update: 2018-02-23 14:44 IST
ಉಡುಪಿ, ಫೆ.23: ಮಣಿಪಾಲ ಹಾಗೂ ಉಡುಪಿ ಸೆನ್ ಪೊಲೀಸರು ವಶ ಪಡಿಸಿಕೊಂಡ ಗಾಂಜಾವನ್ನು ನ್ಯಾಯಾಲಯದ ಆದೇಶದಂತೆ ಶುಕ್ರವಾರ ಉಡುಪಿ ಎಸ್ಪಿ ಕಚೇರಿ ಆವರಣದಲ್ಲಿ ನಾಶ ಪಡಿಸಿದರು.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ನಿಂಬರಗಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಡ್ರಗ್ ಡಿಸ್ಪೋಸಲ್ ಕಮಿಟಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಈ ಕ್ರಮ ಜರಗಿಸಲಾಯಿತು.
ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮೂರು ಪ್ರಕರಣಗಳಲ್ಲಿ ಕ್ರಮವಾಗಿ 1.300 ಕೆ.ಜಿ., 1.500ಕೆ.ಜಿ., 380 ಗ್ರಾಂ ಮತ್ತು ಉಡುಪಿ ಸೆನ್ ಅಪರಾಧ ಪೊಲೀಸರು 608 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಒಟ್ಟು 3.788 ಕೆ.ಜಿ. ಗಾಂಜಾವನ್ನು ಬೆಂಕಿ ಹಚ್ಚಿ ನಾಶಪಡಿಸಲಾಯಿತು.
ಈ ಸಂದರ್ಭ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ನಿಂಬರಗಿ, ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕ ಹೃಷಿಕೇಶ ಸೋನಾವಣೆ, ಉಡುಪಿ ಡಿವೈಎಸ್ಪಿ ಕುಮಾರಸ್ವಾಮಿ, ಮಣಿಪಾಲ ಪೊಲೀಸ್ ನಿರೀಕ್ಷಕ ಸುದರ್ಶನ್ ಮೊದಲಾದವರು ಉಪಸ್ಥಿತರಿದ್ದರು.