ಸವಿತಾ ಸಮಾಜ ಎಸ್ಟಿಗೆ ಸೇರ್ಪಡೆ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲ: ಸಚಿವ ಆಂಜನೇಯ

Update: 2018-02-23 13:47 GMT

ಬೆಂಗಳೂರು, ಫೆ. 23: ರಾಜ್ಯದಲ್ಲಿನ ಸವಿತಾ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ಸದ್ಯಕ್ಕೆ ರಾಜ್ಯ ಸರಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಸ್ಪಷ್ಟಣೆ ನೀಡಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಗಮನ ಸೆಳೆಯುವ ಸೂಚನೆಯಡಿ ಪ್ರಸ್ತಾಪಿಸಿದ ವಿಷಯಕ್ಕೆ ಸಚಿವ ಆಂಜನೇಯ, ಸವಿತಾ ಸಮಾಜವನ್ನು ಎಸ್ಟಿಗೆ ಸೇರಿಸುವ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸವಿತಾ ಸಮಾಜವನ್ನು ಎಸ್ಟಿಗೆ ಸೇರಿಸುವುದರಿಂದ ಆ ಸಮುದಾಯ ಆರ್ಥಿಕ, ಶೈಕ್ಷಣಿಕವಾಗಿ ಸಬಲರಾಗಲು ಸಾಧ್ಯ. ಆದುದರಿಂದ ಸವಿತಾ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News