ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟ; ಇಬ್ಬರಿಗೆ ಗಾಯ

Update: 2018-02-23 14:23 GMT

ಬೆಂಗಳೂರು, ಫೆ.23: ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ದಂಧೆ ನಡೆಯುತ್ತಿದ್ದ ಸ್ಥಳದಲ್ಲಿ ಅಡುಗೆ ಅನಿಲ(ಗ್ಯಾಸ್) ಸೋರಿಕೆಯಾಗಿ ಸ್ಫೋಟ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಘಟನೆ ಇಲ್ಲಿನ ಶಿವಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಿವಾಜಿನಗರದ ಬ್ರಾಡ್ ವೇ ರಸ್ತೆಯ ಅಲ್ತಾಪ್ ಗ್ಯಾಸ್ ರೀಫಿಲ್ಲಿಂಗ್ ಸೆಂಟರ್ ಎಂಬ ಹೆಸರಿನ ಅಂಗಡಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಸಿಲಿಂಡರ್ ಸ್ಫೋಟಗೊಳ್ಳುತ್ತಿದ್ದಂತೆ ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ ತಗುಲಿತು. ಘಟನೆ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಘಟನೆ ನಡೆಯುತ್ತಿದ್ದಂತೆ ಗ್ಯಾಸ್ ಸೆಂಟರ್ ಮಾಲಕ ನಾಸೀರ್ ಖಾನ್ ಎಂಬಾತ ತಲೆಮರೆಸಿಕೊಂಡಿರುವುದಾಗಿ ಹೇಳಲಾಗುತ್ತಿದೆ.

ಘಟನೆ ಸಂಬಂಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಯಗೊಂಡಿರುವ ಇಬ್ಬರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News