ಬಿಬಿಎಂಪಿ ಕಚೇರಿಯಲ್ಲಿ ಪೆಟ್ರೋಲ್ ಎರಚಿದ ನಾರಾಯಣ ಸ್ವಾಮಿಗೆ ಜೈಲು
Update: 2018-02-23 20:03 IST
ಬೆಂಗಳೂರು, ಫೆ. 23: ಹೊರಮಾವು ಬಿಬಿಎಂಪಿ ಕಚೇರಿಯಲ್ಲಿ ಪೆಟ್ರೋಲ್ ಸುರಿದು ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ನಾರಾರಾಣ ಸ್ವಾಮಿಗೆ ಬೆಂಗಳೂರಿನ 10ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ನಾರಾಯಣ ಸ್ವಾಮಿಯನ್ನು ರಾಮಮೂರ್ತಿ ನಗರ ಠಾಣಾ ಪೊಲೀಸರು ಬಂಧಿಸಿ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿತು.
ಫೆ.17ರಂದು ನಾರಾಯಣ ಸ್ವಾಮಿ ಅಕ್ರಮವಾಗಿ ಖಾತೆ ಬದಲಾವಣೆ ಮಾಡದ ಸಿಟ್ಟಿನಿಂದ ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಸುರಿದು ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿ, ಅಧಿಕಾರಿಗಳೊಂದಿಗೆ ದರ್ಪ ತೋರಿದ್ದರು ಎಂದು ಆರೋಪಿಸಲಾಗಿತ್ತು.
ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸುತ್ತಿದ್ದಂತೆ ತಲೆಮರೆಸಿಕೊಂಡಿದ್ದ ನಾರಾಯಣ ಸ್ವಾಮಿ ಶುಕ್ರವಾರ ಬೆಳಗ್ಗೆ ರಾಮಮೂರ್ತಿ ನಗರ ಠಾಣಾ ಪೊಲೀಸ್ ಠಾಣೆಗೆ ಶರಣಾಗಿದ್ದರು.