ಫೆ.24: ಪುದು ಗ್ರಾ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ವಿಜೇತ ಅಭ್ಯರ್ಥಿಗಳಿಗೆ ಅಭಿನಂದನಾ ಸಭೆ
Update: 2018-02-23 20:39 IST
ಫರಂಗಿಪೇಟೆ, ಫೆ. 23: ಪುದು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ 34 ಸದಸ್ಯ ಸ್ಥಾನದಲ್ಲಿ ಕಾಂಗ್ರೆಸ್ ಬೆಂಬಲಿತ 27 ಅಭ್ಯರ್ಥಿಗಳು ಜಯಗೊಳಿಸಿದ್ದು ಫೆ.24 ರಂದು ಸಂಜೆ 4:30ಕ್ಕೆ ಫರಂಗಿಪೇಟೆಯಲ್ಲಿ ವಿಜೇತ ಅಭ್ಯರ್ಥಿಗಳಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಮುಖ್ಯ ಅತಿಥಿಗಳಾಗಿ ಸಚಿವ ಯು ಟಿ ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ರಮನಾಥ ರೈ, ಮುಡಿಪು ಬ್ಲಾಕ್ ಅಧ್ಯಕ್ಷ ಪ್ರಶಾಂತ್ ಕಾಜವ, ಜಿಲಾಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಯುಬಿ ವೆಂಕಟೇಶ್, ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು, ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಮಂಗಳೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ರವೂಫ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ರಾಜ್ಯ ಪ್ರಚಾರ ಸಮಿತಿ ಸಂಚಾಲಕ ಎಫ್ ಮುಹಮ್ಮದ್ ಫಾರೂಕ್ ಫರಂಗಿಪೇಟೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.