ಗ್ರಾಮಕ್ಕೊಂದು ಪ್ರೌಢಶಾಲೆ, ಹೋಬಳಿಗೊಂದು ಪದವಿಪೂರ್ವ ಕಾಲೇಜು: ತನ್ವೀರ್ ಸೇಠ್

Update: 2018-02-23 16:52 GMT

ಬೆಂಗಳೂರು, ಫೆ.23: ರಾಜ್ಯದ ಪ್ರತಿ ಗ್ರಾಮದಲ್ಲಿ ಒಂದು ಪ್ರೌಢ ಶಾಲೆ ಹಾಗೂ ಪ್ರತಿ ಹೋಬಳಿಯಲ್ಲಿ ಒಂದು ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸುವ ಚಿಂತನೆ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.

ಶುಕ್ರವಾರ ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯೆ ಜಯಮ್ಮ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಸದ್ಯ 777 ಪ್ರೌಢ ಶಾಲೆಗಳನ್ನು ತೆರೆಯಲು ಚಿಂತನೆ ನಡೆದಿದೆ. ಹಾಗೆಯೇ, ಪದವಿ ಪೂರ್ವ ಕಾಲೇಜುಗಳನ್ನೂ ಪ್ರಾರಂಭಿಸಲಾಗುವುದು ಎಂದು ಹೇಳಿದರು.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಿಮ್ಮಪ್ಪಯ್ಯನ ಹಳ್ಳಿ ಗ್ರಾಮ ಹಾಗೂ ಮುಷ್ಠಲಗುಮ್ಮಿ ಗ್ರಾಮಗಳಲ್ಲಿ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಜಯಮ್ಮ ಅವರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News