ಉಡುಪಿ: ಫೆ.27ರಂದು ಇಂದಿರಾ ಕ್ಯಾಂಟೀನ್ ಉದ್ಘಾಟನೆ
Update: 2018-02-23 23:08 IST
ಉಡುಪಿ, ಫೆ.23: ಜಿಲ್ಲಾಡಳಿತ, ನಗರಾಭಿವೃದ್ಧಿ ಇಲಾಖೆ, ನಗರಸಭೆ ಉಡುಪಿ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ನಿರ್ಮಾಣ ಗೊಂಡಿರುವ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಫೆ.27ರಂದು ನಡೆಯಲಿದೆ.
ಇಂದಿರಾ ಕ್ಯಾಂಟಿನ್ ಹಾಗೂ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.