ಬಂಟ್ವಾಳ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
Update: 2018-02-24 19:28 IST
ಬಂಟ್ವಾಳ, ಫೆ. 24: ಕೊಲೆ ಪ್ರಕರಣದ ಅರೋಪಿಯೋರ್ವ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗುವ ಸಂದರ್ಭ ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ ಘಟನೆ ಕ್ಯಾಲಿಕಟ್‌ನಲ್ಲಿ ನಡೆದಿದೆ.
ಅಬ್ದುಲ್ ರಹ್ಮಾನ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಪೊಳಲಿ ನಿವಾಸಿ ಸಂತೋಷ್ ಯಾನೆ ಕ್ಯಾಂಡಲ್ ಸಂತು ಕೊಲೆ ಪ್ರಕರಣದ ಆರೋಪಿ ಅಬ್ದುಲ್ ರಹ್ಮಾನ್, ನ್ಯಾಯಾಲಯದಿಂದ ಜಾಮೀನು ಪಡೆದಿದ್ದು, ತದನಂತರ ಸುಮಾರು 7 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆತ ಶುಕ್ರವಾರ ಕ್ಯಾಲಿಕಟ್ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ಸಂದರ್ಭ ವಿಮಾನ ನಿಲ್ದಾಣದ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು, ಬಂಟ್ವಾಳ ಗ್ರಾಮಾಂತರ ಠಾಣೆಗೆ ಹಸ್ತಾಂತರಿಸಿದ್ದಾರೆ.